
ಮಾಗಡಿ(ಏ.15): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಕಾಂಗ್ರೆಸ್ ಟಿಕೆಟ್ ಪಡೆದರೆ ನಾನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಾಲಕೃಷ್ಣ ಕಾಂಗ್ರೆಸ್‌ಗೆ ಬರುವುದಾಗಿ ಹೇಳುತ್ತಿದ್ದಾರೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ದುಡಿಯುತ್ತಿ ದ್ದೇನೆ. ಒಂದು ವೇಳೆ ಪಕ್ಷ ನನ್ನನ್ನು ಸರಿಯಾಗಿ ನಡೆಸಿಕೊ ಳ್ಳದಿದ್ದರೆ ನಾನು ಜೆಡಿಎಸ್ ಸೇರುತ್ತೇನೆ ಎಂದರು. ಶಾಸಕ ಬಾಲಕೃಷ್ಣ ಕಾಂಗ್ರೆಸ್‌ಗೆ ಬರಲು ಉತ್ಸುಕರಾಗಿದ್ದಾರೆ. ನಮ್ಮ ಜನಾಂಗದ ನಾಯಕರಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಮಾಗಡಿಗೆ ಬಂದರೆ ಅವರನ್ನು ಗೌರವ ವಾಗಿ ನಡೆಸಿಕೊಳ್ಳವುದು ತಪ್ಪಾ?, ನಾನು ಅವರನ್ನು ಮಾಗಡಿಗೆ ಬರುವಂತೆ ಆಹ್ವಾನಿಸಿರಲಿಲ್ಲ ಎಂದು ಹೇಳಿ ದರು. ಶಾಸಕ ಬಾಲಕೃಷ್ಣ ನನ್ನ ಬಗ್ಗೆ ಮಾತನಾಡಲು ಅಸಹ್ಯ ಎಂದು ಹೇಳುತ್ತಿದ್ದರು. ಈಗ ನನ್ನ ಬಗ್ಗೆಯೇ ಮಾಧ್ಯಮಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಹೋಗುತ್ತಾರೆಂದು ಮಾತನಾಡುತ್ತಿದ್ದಾರೆ. ಯಾಕೋ ನನ್ನ ಮೇಲೆ ಈಗ ಅವ ರಿಗೆ ಮುತುವರ್ಜಿ ಬಂದಿದೆ. ಈಗ ನನ್ನ ಬಗ್ಗೆ ಮಾತನಾ ಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ರಾಮನಗರಲ್ಲಿ ನಡೆದ ಕಾಡಾ ಸಭೆಯಲ್ಲಿ ಅರ್ಕಾವತಿ ನದಿ ಮೂಲಕ ಮಂಚನಬೆಲೆ ನೀರನ್ನು ಕನಕಪುರಕ್ಕೆ ಬಿಡಲು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಶಾಸಕರು ಒಪ್ಪಿದ್ದರು. ಆಗ ಮಾತನಾಡದ ಶಾಸಕರು, ಈಗ ಮಾಗಡಿ ಜನರ ಕಣ್ಣು ಒರೆಸಲು ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.