
ಆನೇಕಲ್ (ಮಾ.14): ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ರಾಮಕೃಷ್ಣಾಪುರದಲ್ಲಿ ಕೊಳೆಯುತ್ತಿರುವ ಟನ್'ಗಟ್ಟಲೆ ಮೇವಿನ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು.
ವರದಿ ಮಾಡಿದ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮುನಿರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಕೊಳೆಯುತ್ತಿದ್ದ ಮೇವಿನ ರಾಶಿ ಪರಿಶೀಲನೆ ನಡೆಸಿದ ಅಧ್ಯಕ್ಷ ಮುನಿರಾಜು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಭೀಕರ ಬರಗಾಲ, ಮಳೆ ಇಲ್ಲದೆ ಬೆಳೆಯೂ ಇಲ್ಲ. ದನಕರುಗಳು ಮೇವಿಲ್ಲದೆ ಅಸ್ಥಿಪಂಜರದಂತೆ ಬಡಕಲಾಗಿ ಸಾಯುತಿವೆ. ಆದರೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ರಾಮಕೃಷ್ಣಾಪುರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೇವು ಸಂಗ್ರಹವಾಗಿದೆ.
ಟನ್ಗಟ್ಟಲೆ ರಾಸುಗಳ ಫುಡ್ ಮೂಟೆಗಳು ಒಣಗಿ ಕೊಳೆತು ನಾರುತ್ತಿರುವ ಬಗ್ಗೆ ಸುವರ್ಣನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.