36th National Games; ಕೇಂದ್ರ ಗೃಹ ಸಚಿವ ಅಮಿತ್ ಶಾರಿಂದ ಅಧಿಕೃತ ಗೀತೆ, ಲಾಂಛನ ಅನಾವರಣ!

Published : Sep 03, 2022, 05:16 PM ISTUpdated : Sep 03, 2022, 05:24 PM IST
36th National Games; ಕೇಂದ್ರ ಗೃಹ ಸಚಿವ ಅಮಿತ್ ಶಾರಿಂದ ಅಧಿಕೃತ ಗೀತೆ, ಲಾಂಛನ ಅನಾವರಣ!

ಸಾರಾಂಶ

36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅದ್ಧೂರಿ ಕಾರ್ಯಕ್ರಮದ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲು ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ.  ಈ ಕಾರ್ಯಕ್ರಮದಲ್ಲಿ  ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್(ಲಾಂಛನ)ವನ್ನು ಅನಾವರಣ ಗೊಳ್ಳಲಿದೆ.

ಅಹಮದಾಬಾದ್(ಸೆ 3):  36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಗುಜರಾತ್ ಸಜ್ಜಾಗಿದೆ.  ಭಾನುವಾರ (ಸೆಪ್ಟೆಂಬರ್ 4) ಸಂಜೆ ನಡೆಯಲಿರುವ ಇಕೆಎ ಅರೆನಾ ಟ್ರಾನ್ಸ್‌ಸ್ಟೇಡಿಯಾದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಕ್ರೀಡಾಕೂಟಕ್ಕೆ ಚಾಲನೆ ನೀಡಲು ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೂಡಾ ಭಾಗವಹಿಸಲಿದ್ದಾರೆ. ಗುಜರಾತ್‌ನ ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಒಟ್ಟು 9000ಕ್ಕೂ ಹೆಚ್ಚು ಮಂದಿ ಈ ಆಕರ್ಷಕ ಸಮಾರಂಭಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್(ಲಾಂಛನ)ವನ್ನು ಅನಾವರಣಗೊಳಿಸಲಾಗುತ್ತದೆ. ಇದರ ಜೊತೆಗೆ ಕ್ರೀಡಾಕೂಟದ ವೆಬ್‌ಸೈಟ್, ಮೊಬೈಲ್ ಆ್ಯಪ್‌ಗಳೂ ಬಿಡುಗಡೆಗೊಳ್ಳಲಿವೆ. ಇದರೊಂದಿಗೆ ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

‘ಕ್ರೀಡಾಕೂಟವನ್ನು(36th National Games) ಆಯೋಜಿಸಲು ನಾವು ಉತ್ಸುಕಗೊಂಡಿದ್ದು, ಆತಿಥ್ಯ ಹಕ್ಕು ಸಿಕ್ಕಿರುವುದು ಹೆಮ್ಮೆ ನೀಡಿದೆ. ಭಾರತದ ಅಗ್ರ ಕ್ರೀಡಾಪಟುಗಳು(athletics) ಹಾಗೂ ಅಧಿಕಾರಿಗಳು ನಮ್ಮ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನುವ ವಿಚಾರ ಬಹಳ ಖುಷಿ ನೀಡುತ್ತಿದೆ. ಕ್ರೀಡಾಕೂಟಕ್ಕೆ ಬೇಕಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಗುಜರಾತ್(Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್(cm bhupendra patel) ಹೇಳಿದ್ದಾರೆ.

 

ಪಾರದರ್ಶಕ ಆಯ್ಕೆಯಿಂದಾಗಿ ಕ್ರೀಡಾ ಯಶಸ್ಸಿಗೆ ಕಾರಣ: ಪ್ರಧಾನಿ ನರೇಂದ್ರ ಮೋದಿ

ಗುಜರಾತ್‌ನ ಕ್ರೀಡಾ ಸಚಿವ ಹರ್ಷ್ ಸಾಂಗ್ವಿ, ಅಹಮದಾಬಾದ್‌ನ ಮಹಾಪೌರ ಕಿರಿಟ್‌ಕುಮಾರ್ ಜೆ. ಪರ್ಮಾರ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಹಂಗಾಮಿ ಅಧ್ಯಕ್ಷ ಅನಿಲ್ ಖನ್ನಾ, ಕೇಂದ್ರ ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಸುಜಾತ ಚತುರ್ವೇದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

36ನೇ ರಾಷ್ಟ್ರೀಯ ಕ್ರೀಡಾಕೂಟವು 7 ವರ್ಷಗಳ ಬಳಿಕ ಆಯೋಜನೆಗೊಳ್ಳುತ್ತಿದ್ದು, ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ನಡೆಯಲಿದೆ. ಗುಜರಾತ್‌ನ 6 ನಗರಗಳಾದ ಅಹಮದಾಬಾದ್, ಗಾಂಧಿನಗರ, ಸೂರತ್, ವಡೋದರ, ರಾಜ್‌ಕೋಟ್ ಮತ್ತು ಭಾವ್‌ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೈಕ್ಲಿಂಗ್ ಸ್ಪರ್ಧೆಗಳನ್ನು ನವದೆಹಲಿಯಲ್ಲಿ ನಡೆಸಲಾಗುತ್ತದೆ.

ನಿಮ್ಮೆಲ್ಲರ ಪರಿಶ್ರಮದಿಂದ ಸ್ಪೂರ್ತಿದಾಯಕ ಸಾಧನೆ ಮಾಡಿದ್ದೀರ: ಕಾಮನ್‌ವೆಲ್ತ್ ಸಾಧಕರಿಗೆ ಮೋದಿ ಶಹಬ್ಬಾಶ್

28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 7000ಕ್ಕೂ ಹೆಚ್ಚು ಕ್ರೀಡಾಪಟುಗಳು, 36ಕ್ಕೂ ಹೆಚ್ಚು ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಕ್ರೀಡಾಕೂಟದಲ್ಲಿ ದೇಸಿ ಕ್ರೀಡೆಗಳಾದ ಮಲ್ಲಕಂಭ ಮತ್ತು ಯೋಗಾಸನವನ್ನು ಸೇರ್ಪಡೆಗೊಳಿಸಲಾಗಿದೆ. ಕಳೆದ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವು 2015ರಲ್ಲಿ ಕೇರಳದಲ್ಲಿ ನಡೆದಿತ್ತು.

ಡಬಲ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಪದಕ
ಇತ್ತೀಚೆಗಷ್ಟೇ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದ ಭಾರತದ ತಾರಾ ಜೋಡಿ ಸಾತ್ವಿಕ್‌ ರಂಕಿರೆಡ್ಡಿ-ಚಿರಾಗ್‌ ಶೆಟ್ಟಿಶುಕ್ರವಾರ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಪದಕದ ಸಾಧನೆ ಮಾಡಿದೆ. ಕೂಟದಲ್ಲಿ ಸೆಮಿಫೈನಲ್‌ಗೇರಿದ ಈ ಜೋಡಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಪುರುಷರ ಡಬಲ್ಸ್‌ನಲ್ಲಿ ಚೊಚ್ಚಲ ಪದಕ ಖಚಿತಪಡಿಸಿಕೊಂಡಿತು.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!