ಕೊರೋನಾ ನಡುವೆಯೇ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌

Published : Mar 11, 2020, 11:36 AM IST
ಕೊರೋನಾ ನಡುವೆಯೇ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌

ಸಾರಾಂಶ

ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಹಾಗೂ ಕಿದಂಬಿ ಶ್ರೀಕಾಂತ್ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಬರ್ಮಿಂಗ್‌ಹ್ಯಾಂ(ಮಾ.11): ವಿಶ್ವದ ಪ್ರತಿಷ್ಠಿತ ಬ್ಯಾಡ್ಮಿಂಟನ್‌ ಟೂರ್ನಿಗಳಲ್ಲಿ ಒಂದಾದ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ಬುಧವಾರದಿಂದ ಆರಂಭಗೊಳ್ಳಲಿದ್ದು, ಭಾರತದ ಖ್ಯಾತ ತಾರೆಗಳಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್‌ ಪ್ರಶಸ್ತಿ ಗೆಲ್ಲುವ ಫೇವರಿಟ್‌ಗಳ ಸಾಲಿನಲ್ಲಿದ್ದಾರೆ. 

ಬ್ಯಾಡ್ಮಿಂಟನ್ ಅಂಗಳದಿಂದ ಬಾಲಿವುಡ್‌ ಆಕಾಶಕ್ಕೆ ಕನ್ನಡತಿ ದೀಪಿಕಾ ಪಡುಕೋಣೆ!

ಆದರೆ ವಿಶ್ವದೆಲ್ಲೆಡೆ ಅತಿ ವೇಗದಲ್ಲಿ ಹರಡುತ್ತಿರುವ ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಟೂರ್ನಿಯನ್ನು ನಡೆಸುವುದರ ಬಗ್ಗೆ ಇನ್ನೂ ಅನುಮಾನ ಇದ್ದೇ ಇದೆ. ಇಂಗ್ಲೆಂಡ್‌ನಲ್ಲಿ ಈಗಾಗಲೇ 300 ಮಂದಿಗೆ ಮಾರಕ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದ್ದು, ಐದು ಮಂದಿ ಸಾವಿಗೀಡಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಈಗಾಗಲೇ ಇದೇ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ 10ಕ್ಕೂ ಹೆಚ್ಚು ಶಟ್ಲರ್‌ಗಳು ಟೂರ್ನಿಯಿಂದ ಹಿಂದಕ್ಕೆ ಸರಿದಿದ್ದಾರೆ. ಆದರೂ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಟೂರ್ನಿಯ ಆಯೋಜಕರು ಟೂರ್ನಿ ನಿಲ್ಲಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸ್ಪೇನ್‌ ಮಾಸ್ಟರ್ಸ್‌ ಟೂರ್ನಿ: ಸೈನಾ ನೆಹ್ವಾಲ್‌ ಔಟ್‌

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲು ಸೈನಾ ನೆಹ್ವಾಲ್ ಹಾಗೂ ಕಿದಂಬಿ ಶ್ರೀಕಾಂತ್ ಪಾಲಿಗೆ ಕೊನೆಯ ಅವಕಾಶ ಎನಿಸಿದೆ. ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಈ ಇಬ್ಬರು ಬ್ಯಾಡ್ಮಿಂಟನ್ ಪಟುಗಳು ಒಲಿಂಪಿಕ್ಸ್ ಭಾಗವಹಿಸುವ ಆಸೆ ಸಫಲವಾಗಲಿದೆ. 

ಕೊರೋನಾ ವೈರಸ್ ಆತಂಕ; ಭಾರತೀಯ ಕ್ರೀಡೆಗೆ ತಟ್ಟಿದ ಬಿಸಿ!

ಅತ್ಯಂತ ಹಳೆಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಒಂದೆನಿಸಿರುವ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಇದುವರೆಗು ಭಾರತದ ಇಬ್ಬರು ಬ್ಯಾಡ್ಮಿಂಟನ್ ದಿಗ್ಗಜರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಪ್ರಕಾಶ್ ಪಡುಕೋಣೆ ಹಾಗೂ ಪುಲ್ಲೇಲಾ ಗೋಪಿಚಂದ್ ಇದುವರೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Asian Games 2026: ಕೊನೆಯ ಕ್ಷಣದವರೆಗೂ ಜಿದ್ದಾಜಿದ್ದಿ; ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಚಿನ್ನದ ಕಿರೀಟ!
ಕಬಡ್ಡಿಯಲ್ಲಿ ಭಾರತಕ್ಕೆ ಚಿನ್ನದ ಪದಕ, ರೋಚಕ ಪಂದ್ಯದಲ್ಲಿ ಇರಾನ್ ವಿರುದ್ಧ ಭರ್ಜರಿ ಗೆಲುವು