ಏಷ್ಯನ್‌ ಬಾಕ್ಸಿಂಗ್‌ನಲ್ಲಿ ಭಾರತ ಸಾರ್ವಕಾಲಿಕ ಸಾಧನೆ

Kannadaprabha News   | Asianet News
Published : May 28, 2021, 11:11 AM IST
ಏಷ್ಯನ್‌ ಬಾಕ್ಸಿಂಗ್‌ನಲ್ಲಿ ಭಾರತ ಸಾರ್ವಕಾಲಿಕ ಸಾಧನೆ

ಸಾರಾಂಶ

* ‍‍ಏಷ್ಯನ್‌ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾರ್ವಕಾಲಿಕ ಸಾಧನೆ. * ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ 15 ಪದಕ ಪಕ್ಕಾ *  ಸೆಮೀಸ್‌ ಪ್ರವೇಶಿಸಿದ ಅಮಿತ್‌ ಪಂಘಾಲ್‌, ವಿಕಾಸ್‌ ಕೃಷನ್‌ ಹಾಗೂ ವರೀಂದರ್‌ ಸಿಂಗ್‌

ದುಬೈ(ಮೇ.28): ಇಲ್ಲಿ ನಡೆಯುತ್ತಿರುವ ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ 15 ಪದಕಗಳನ್ನು ಗೆಲ್ಲುವುದು ಖಚಿತವಾಗಿದೆ. ಈ ಮೂಲಕ ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸಾರ್ವಕಾಲಿಕ ಸಾಧನೆ ಮಾಡಿದೆ.

ತಾರಾ ಬಾಕ್ಸರ್‌ಗಳಾದ ಅಮಿತ್‌ ಪಂಘಾಲ್‌, ವಿಕಾಸ್‌ ಕೃಷನ್‌ ಹಾಗೂ ವರೀಂದರ್‌ ಸಿಂಗ್‌ ಸಹ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. 2019ರ ಆವೃತ್ತಿಯಲ್ಲಿ 13 ಪದಕಗಳನ್ನು ಗೆದ್ದಿದ್ದು, ಭಾರತದ ಈ ವರೆಗಿನ ದಾಖಲೆಯಾಗಿತ್ತು.

ಫ್ರೆಂಚ್‌ ಓಪನ್‌ ಟೆನಿಸ್‌: ಸುಮಿತ್‌ಗೆ ಸೋಲು

ಪ್ಯಾರಿಸ್‌: ಭಾರತದ ಅಗ್ರ ಟೆನಿಸಿಗ ಸುಮಿತ್‌ ನಗಾಲ್‌ ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಂ ಟೂರ್ನಿಯ ಪ್ರಧಾನ ಸುತ್ತಿಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಟೂರ್ನಿಯ ಅರ್ಹತಾ ಸುತ್ತಿನ 2ನೇ ಪಂದ್ಯದಲ್ಲಿ ನಗಾಲ್‌, ವಿಶ್ವ ರ‍್ಯಾಂಕಿಂಗ್‌ನಲ್ಲಿ ತಮಗಿಂತ 23 ಸ್ಥಾನಗಳು ಕೆಳಗಿರುವ, ವಿಶ್ವ ನಂ.146 ಚಿಲಿ ದೇಶದ ಅಲೆಯಾಂಡ್ರೋ ಟಬಿಲೊ ವಿರುದ್ಧ 3-6, 3-6 ನೇರ ಸೆಟ್‌ಗಳಲ್ಲಿ ಪರಾಭವಗೊಂಡರು. 

ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌‌: ಭಾರತಕ್ಕೆ 12 ಪದಕ ಖಚಿತ

ಟೂರ್ನಿಯಲ್ಲಿ ಭಾರತದ ಯಾವೊಬ್ಬ ಸಿಂಗಲ್ಸ್‌ ಆಟಗಾರರು ಪ್ರಧಾನ ಸುತ್ತಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ರಾಮ್‌ಕುಮಾರ್‌ ರಾಮನಾಥನ್‌, ಪ್ರಜ್ನೇಶ್‌ ಗುಣೇಶ್ವರನ್‌ ಹಾಗೂ ಅಂಕಿತಾ ರೈನಾ ಸಹ ಅರ್ಹತಾ ಸುತ್ತಿನಲ್ಲೇ ಸೋಲುಂಡಿದ್ದರು. ಪುರುಷರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ ಹಾಗೂ ದಿವಿಜ್‌ ಶರಣ್‌ ಸ್ಪರ್ಧಿಸಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!