ಕೊರೋನಾ ಭೀತಿ: ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ದುಬೈಗೆ ಶಿಫ್ಟ್‌

By Suvarna NewsFirst Published Apr 29, 2021, 10:02 AM IST
Highlights

ಭಾರತದಲ್ಲಿ ನಡೆಯಬೇಕಿದ್ದ ಏಷ್ಯನ್ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಕೊರೋನಾ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಏ.29): ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನ ಪರಿಣಾಮ ಮೇ 21ರಿಂದ 31ರ ತನಕ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಅನ್ನು ಸ್ಥಳಾಂತರಿಸಲಾಗಿದೆ.

ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕೆಲ ರಾಷ್ಟ್ರಗಳು ಭಾರತಕ್ಕೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಿಸಿವೆ. ಈ ಹಿನ್ನೆಲೆಯಲ್ಲಿ ಏಷ್ಯನ್‌ ಬಾಕ್ಸಿಂಗ್‌ ಒಕ್ಕೂಟದ ಜತೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿರುವುದಾಗಿ ಬಾಕ್ಸಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾ ತಿಳಿಸಿದೆ.

ಭಾರತ ರಿಲೇ ತಂಡದ ಟೋಕಿಯೋ ಒಲಿಂಪಿಕ್ ಕನಸು ಭಗ್ನ..!

ಪ್ರತಿನಿತ್ಯ ಭಾರತದಲ್ಲಿ 3 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಹಲವು ದೇಶಗಳು ಭಾರತದಿಂದ ಬರುವ ಹಾಗೂ ಭಾರತಕ್ಕೆ ಹೋಗುವ ವಿಮಾನಗಳ ಮೇಲೆ ನಿರ್ಭಂದ ಹೇರಿವೆ. ಕೋವಿಡ್ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಹಲವು ರಾಷ್ಟ್ರಗಳು ಅಂತಾರಾಷ್ಟ್ರೀಯ ಪ್ರವಾಸಕ್ಕೆ ನಿರ್ಭಂದ ಹೇರಿವೆ. ಹೀಗಾಗಿ ಭಾರತೀಯ ಬಾಕ್ಸಿಂಗ್ ಫೆಡರೇಷನ್(ಬಿಎಫ್‌ಐ) ಹಾಗೂ ಏಷ್ಯನ್ ಬಾಕ್ಸಿಂಗ್ ಫೆಡರೇಷನ್‌ ಈ ಕ್ರೀಡಾಕೂಟವನ್ನು ಮುಂದೂಡುವ ತೀರ್ಮಾನ ತೆಗೆದುಕೊಂಡಿದೆ ಎಂದು ಬಿಎಫ್‌ಐ ತಿಳಿಸಿದೆ.
 

click me!