ಆಸ್ಟ್ರೇಲಿಯನ್ ಓಪನ್‌ ಗ್ರ್ಯಾನ್‌ಸ್ಲಾಂ: 3ನೇ ಸುತ್ತಿಗೇರಿದ ಜೋಕೋ, ಸರೆನಾ

Published : Feb 11, 2021, 08:31 AM IST
ಆಸ್ಟ್ರೇಲಿಯನ್ ಓಪನ್‌ ಗ್ರ್ಯಾನ್‌ಸ್ಲಾಂ: 3ನೇ ಸುತ್ತಿಗೇರಿದ ಜೋಕೋ, ಸರೆನಾ

ಸಾರಾಂಶ

ಆಸ್ಟ್ರೇಲಿಯನ್ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯಲ್ಲಿ ಸರ್ಬಿಯಾದ ನೋವಾಕ್‌ ಜೋಕೋವಿಚ್ ಹಾಗೂ ಅಮೆರಿಕದ ದಿಗ್ಗಜ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ಮೂರನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಮೆಲ್ಬರ್ನ್(ಫೆ.11)‌: ಹಾಲಿ ಚಾಂಪಿಯನ್‌ ಹಾಗೂ ನಂ.1 ಆಟಗಾರ ಸರ್ಬಿಯಾದ ನೋವಾಕ್‌ ಜೋಕೋವಿಚ್‌, ಆಸ್ಪ್ರೇಲಿಯನ್‌ ಓಪನ್‌ ಗ್ರ್ಯಾನ್‌ ಸ್ಲಾಂ ಟೆನಿಸ್‌ ಟೂರ್ನಿಯ 3ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ 2ನೇ ಸುತ್ತಿನ ಪಂದ್ಯದಲ್ಲಿ ಅಮೆರಿಕದ ಫ್ರಾನ್ಸೆಸ್‌ ಟಿಯಾಫೋ ವಿರುದ್ಧ 6-3, 6-7,7-6,6-3 ಸೆಟ್‌ಗಳಲ್ಲಿ ಜಯಗಳಿಸಿದರು.

ಇದೇ ವೇಳೆ ಮಾಜಿ ಗ್ರ್ಯಾನ್‌ ಸ್ಲಾಂ ಚಾಂಪಿಯನ್‌ ಸ್ವಿಜರ್‌ಲೆಂಡ್‌ನ ಸ್ಟ್ಯಾನಿಸ್ಲಾಸ್‌ ವಾವ್ರಿಂಕಾ 2ನೇ ಸುತ್ತಿನಲ್ಲಿ ಸೋತು ಹೊರಬಿದ್ದರು. ಮಹಿಳಾ ಸಿಂಗಲ್ಸ್‌ನ 2ನೇ ಸುತ್ತಿನ ಪಂದ್ಯದಲ್ಲಿ ಸರ್ಬಿಯಾದ ಸ್ಟೊವಾನೊವಿಚ್‌ ವಿರುದ್ಧ 6-3, 6-0ಯಲ್ಲಿ ಗೆದ್ದ ಸೆರೆನಾ ವಿಲಿಯಮ್ಸ್‌, ಆಸ್ಪ್ರೇಲಿಯಾದ ಆಲಾ ಟಾಮ್ಲಿಯೊನಿಚ್‌ ವಿರುದ್ಧ ಸೋಲುವ ಭೀತಿಯಲ್ಲಿದ್ದ ರೊಮೇನಿಯಾದ ಸಿಮೋನಾ ಹಾಲೆಪ್‌ 4-6, 6-4, 7-5 ಸೆಟ್‌ಗಳಲ್ಲಿ ಗೆದ್ದು 3ನೇ ಸುತ್ತಿಗೇರಿದರು.

ಆಸ್ಟ್ರೇಲಿಯನ್ ಓಪನ್‌: 2ನೇ ಸುತ್ತಿಗೆ ಸೆರೆನಾ, ಜೋಕೋ ಲಗ್ಗೆ

ಬೋಪಣ್ಣ ಜೋಡಿಗೆ ಸೋಲು: ಪುರುಷರ ಡಬಲ್ಸ್‌ ಮೊದಲ ಸುತ್ತಿನಲ್ಲಿ ಭಾರತದ ರೋಹನ್‌ ಬೋಪಣ್ಣ ಹಾಗೂ ಜಪಾನ್‌ನ ಬೆನ್‌ ಮೆಕ್‌ಲ್ಯಾಚ್‌ಲಾನ್‌ ಜೋಡಿ ಸೋಲು ಅನುಭವಿಸಿ ಹೊರಬಿದ್ದಿದೆ. ದ.ಕೊರಿಯಾದ ಜಿ ಸುಂಗ್‌ ಹಾಗೂ ಮಿನ್‌ ಸೊಂಗ್‌ ವಿರುದ್ಧ 4-6, 6-7 ಸೆಟ್‌ಗಳಲ್ಲಿ ಪರಾಭವಗೊಂಡಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಲಿಂಪಿಕ್ಸ್‌ನಲ್ಲಿ ಹೆಚ್ಚು ಪದಕ ಗೆಲ್ಲಲು ಭಾರತ ಮಾಡಬೇಕಾದ್ದೇನು? ಪ್ರಧಾನಿ ಮೋದಿ ಮಹತ್ವದ ಸೂತ್ರ
ಕಂಠೀರವ ಸ್ಟೇಡಿಯಂಗೆ ಕ್ರೀಡಾ ಇಲಾಖೆ ಕಾಯಕಲ್ಪ; ಹೊರಾಂಗಣ ಕ್ರೀಡಾಂಗಣದಲ್ಲಿ ಬಹುಕೋಟಿ ರುಪಾಯಿ ವೆಚ್ಚದಲ್ಲಿ ನವೀಕರಣ!