
ಬೆಂಗಳೂರು(ನ.12): ಪ್ರತಿ ನವೆಂಬರ್‌ನಲ್ಲಿ ಕರ್ನಾಟಕ ಟೆನಿಸ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿದ್ದ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಯನ್ನು ಈ ಬಾರಿ 2020ರ ಫೆ.10 ರಿಂದ 16ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಟೂರ್ನಿಯನ್ನು 3 ತಿಂಗಳ ಕಾಲ ಮುಂದೂಡಲಾಗಿದೆ.
ಬೆಂಗಳೂರು ಓಪನ್: ಪ್ರಜ್ಞೇಶ್ ಚಾಂಪಿಯನ್
ಬೆಂಗಳೂರು ಓಪನ್, ಪುಣೆ ಎಟಿಪಿ 250 ಟೂರ್ನಿಯನ್ನು ಅನುಸರಿಸಲಿದ್ದು, ಆಸ್ಟ್ರೇಲಿಯನ್ ಓಪನ್ ಮಾದರಿಯಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ತಾರಾ ಟೆನಿಸಿಗರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಟೂರ್ನಿಯ ಪ್ರಶಸ್ತಿ ಮೊತ್ತವನ್ನು ಅಂದಾಜು ₹1.16 ಕೋಟಿಗೆ ಏರಿಸಲಾಗಿದೆ. ಟೂರ್ನಿಗೆ ಕರ್ನಾಟಕ ರಾಜ್ಯ ಸರ್ಕಾರ ಸೇರಿದಂತೆ ಕಾರ್ಪೋರೆಟ್ ಕಂಪೆನಿಗಳು ಪ್ರಾಯೋಜಕತ್ವ ನೀಡುತ್ತಿವೆ.
ಟೆನಿಸ್ ರ‍್ಯಾಂಕಿಂಗ್: ಅಗ್ರ 100ರ ಪಟ್ಟಿ ಲಿಯಾಂಡರ್ ಪೇಸ್ ಔಟ್
ಕಳೆದ ಆವತ್ತಿಯ ಬೆಂಗಳೂರು ಓಪನ್ ಟೂರ್ನಿಯಲ್ಲಿ ಪ್ರಜ್ಞೇಶ್ ಗುಣೇಶ್ವರನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ತಮ್ಮ ದೇಶದವರೇ ಆದ ಸಾಕೇತ್ ಮೈನೇನಿ ವಿರುದ್ಧ 6-2, 6-2 ನೇರ ಸೆಟ್ ಗಳಲ್ಲಿ ಮಣಿಸಿ ಗುಣೇಶ್ವರನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.