ಪೋಕ್ಸೋ ಕೇಸ್‌ನಲ್ಲಿ ಬ್ರಿಜ್‌ಭೂಷಣ್ ಸಿಂಗ್ ದೋಷಮುಕ್ತ!

Published : May 27, 2025, 10:46 AM IST
 bjp mp Brij Bhushan Singh

ಸಾರಾಂಶ

ಅಪ್ರಾಪ್ತ ಕುಸ್ತಿಪಟು ನೀಡಿದ್ದ ದೂರಿನನ್ವಯ ದಾಖಲಾಗಿದ್ದ ಪೋಕ್ಸೋ ಕೇಸಲ್ಲಿ ಬ್ರಿಜ್ ಭೂಷಣ್ ದೋಷ ಮುಕ್ತರಾಗಿದ್ದಾರೆ. ದೆಹಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋಟ್ ಅನ್ನು ಪಟಿಯಾಲ ಹೈಕೋರ್ಟ್ ಅಂಗೀಕರಿಸಿದೆ. 

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ, ಮಾಜಿ ಸಂಸದ ಬ್ರಿಜ್‌ ಭೂಷಣ್ ಸಿಂಗ್‌ಗೆ ಅಲ್ಪ ರಿಲೀಫ್‌ ಸಿಕ್ಕಿದೆ. ಅಪ್ರಾಪ್ತ ಕುಸ್ತಿಪಟು ನೀಡಿದ್ದ ದೂರಿನನ್ವಯ ದಾಖಲಾಗಿದ್ದ ಪೋಕ್ಸೋ ಕೇಸಲ್ಲಿ ಬ್ರಿಜ್ ಭೂಷಣ್ ದೋಷ ಮುಕ್ತರಾಗಿದ್ದಾರೆ. ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋಟ್ ಅನ್ನು ಸೋಮವಾರ ಪಟಿಯಾಲ ಹೈಕೋರ್ಟ್‌ನ ಹೆಚ್ಚುವರಿ ಸೆಶನ್ ನ್ಯಾಯಾಧೀಶ ಗೋಮತಿ ಮನೋಚ ಅವರು ಅಂಗೀಕರಿಸಿದರು. ನ್ಯಾಯಾಲಯದಲ್ಲಿ ಹಾಜರಿದ್ದ ಅಪ್ರಾಪ್ತೆ ಹಾಗೂ ಆಕೆಯ ತಂದೆ ಪೊಲೀಸರ ಬಿ-ರಿಪೋರ್ಟ್‌ಗೆ ಸಮ್ಮತಿ ಸೂಚಿಸಿದ್ದರಿಂದ ಪ್ರಕರಣ ರದ್ದುಪಡಿಸಲಾಗಿದೆ

ಏನಿದು ಪ್ರಕರಣ?: 2023ರ ಜನವರಿಯಲ್ಲಿ ವಿನೇಶ್ ಫೋಗಟ್, ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರಗಣ್ಯ ಕುಸ್ತಿಪಟುಗಳು ಆಗಿನ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಿಸಿ ಭಾರೀ ಪ್ರತಿಭಟನೆ ನಡೆಸಿದ್ದರು. ಬಳಿಕ ಏಪ್ರಿಲ್‌ನಲ್ಲಿ ಬ್ರಿಜ್ ವಿರುದ್ಧ 2 ಎಫ್‌ಐಆರ್ ದಾಖಲಾಗಿತ್ತು. ಆದರೆ 2023ರ ಆಗಸ್ಟ್‌ನಲ್ಲಿ ತಮ್ಮ ಹೇಳಿಕೆ ಬದಲಿಸಿದ್ದ ಅಪ್ರಾಪ್ತೆ ಹಾಗೂ ಆಕೆಯ ತಂದೆ, ಬ್ರಿಜ್‌ಭೂಷಣ್ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ಸುಳ್ಳು ಎಂದಿದ್ದರು.

ಇನ್ನೂ ಒಂದು ಕೇಸ್ ಬಾಕಿ

ಬ್ರಿಜ್‌ಭೂಷಣ್ ವಿರುದ್ಧ 2 ಎಫ್‌ಐಆರ್ ದಾಖಲಾಗಿತ್ತು. ಈ ಪೈಕಿ ಅಪ್ರಾಪ್ತೆ ದೂರಿನನ್ವಯ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ಇತರ 6 ಕುಸ್ತಿ ಪಟುಗಳ ದೂರಿನ ಆಧಾರದಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣ ಚಾಲ್ತಿಯಲ್ಲಿದೆ.

ಬೋಟ್ ದುರಂತ: ಗಂಗೂಲಿ ಸಹೋದರ,ಅತ್ತಿಗೆಯ ರಕ್ಷಣೆ!

ಪುರಿ: ಒಡಿಶಾದ ಪುರಿ ಕಡಲತೀರದಲ್ಲಿ ವಿಹರಿಸುತ್ತಿದ್ದಾಗ ಸಂಭವಸಿದ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಹಾಗೂ ಅತ್ತಿಗೆ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಾಲ್ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥರಾಗಿರುವ ಸ್ನೇಹಾಶಿಶ್ ಗಂಗೂಲಿ ಹಾಗೂ ಅವರ ಪತ್ನಿ ಅರ್ಪಿತಾ ಶನಿವಾರ ಸ್ಪೀಡ್‌ಬೋಟ್‌ನಲ್ಲಿ ವಿಹರಿಸುತ್ತಿದ್ದರು. ಈ ವೇಳೆ ದೊಡ್ಡ ಅಲೆ ಅಪ್ಪಳಿಸಿದ್ದು, ಬೋಟ್ ಮಗುಚಿಬಿದ್ದಿದೆ. ಬೋಟ್‌ನಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಕೂಡಲೇ ಅವರನ್ನು ರಕ್ಷಣಾ ಸಿಬ್ಬಂದಿ ಅಪಾಯದಿಂದ ಪಾರು ಮಾಡಿ, ದಡಕ್ಕೆ ಕರೆತಂದಿದ್ದಾರೆ. ಇದರ ಫೋಟೋ, ವಿಡಿಯೋಗಳು ವೈರಲ್ ಆಗಿವೆ.

ಏಷ್ಯನ್ ಅಥ್ಲೆಟಿಕ್ಸ್‌ಗೆ ಆಯ್ಕೆ ಆಗಿದ್ದ ಸ್ನೇಹಾ ಅಮಾನತು!

ನವದೆಹಲಿ: ಏಷ್ಯನ್ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದ ಭಾರತದ ಓಟಗಾರ್ತಿ ಸ್ನೇಹಾ ಕೊಲ್ಲೇರಿ ಡೋಪಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು ತಾತ್ಕಾಲಿಕವಾಗಿ ಅಮಾನತುಗೊಂಡಿದ್ದಾರೆ. ಸೋಮವಾರ ಆರಂಭಗೊಳ್ಳಲಿರುವ ಏಷ್ಯನ್ ಅಥ್ಲೆಟಿಕ್ಸ್‌ಗೆ ಆಯ್ಕೆಯಾಗಿದ್ದ 59 ಸ್ಪರ್ಧಿಗಳಲ್ಲಿ ಸ್ನೇಹಾ ಕೂಡಾ ಸ್ಥಾನ ಪಡೆದಿದ್ದರು.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!