
ಗುವಾಂಗ್ಜು(ಡಿ.12): ವಿಶ್ವ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸ್ಪರ್ಧಿಸುತ್ತಿರುವ ಭಾರತದ ಏಕೈಕ ಶಟ್ಲರ್ ಪಿ.ವಿ.ಸಿಂಧು ಸೋಲಿನ ಆರಂಭ ಪಡೆದಿದ್ದಾರೆ. ಮಹಿಳಾ ಸಿಂಗಲ್ಸ್‌ನ ‘ಎ’ ಗುಂಪಿನ ಪಂದ್ಯದಲ್ಲಿ ಬುಧವಾರ ಹಾಲಿ ಚಾಂಪಿಯನ್ ಸಿಂಧು ಮುಗ್ಗರಿಸಿದ್ದಾರೆ. ಈ ಮೂಲಕ ಭಾರತೀಯ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಇದನ್ನೂ ಓದಿ: PBL 5ನೇ ಆವೃತ್ತಿ ಹರಾಜು ಪ್ರಕ್ರಿಯೆ; ಸಿಂಧುಗೆ ಬಂಪರ್!
ಜಪಾನ್‌ನ ಅಕಾನೆ ಯಮಗುಚಿ ವಿರುದ್ಧ 21-18, 18-21, 8-21 ಗೇಮ್‌ಗಳಲ್ಲಿ ಸಿಂಧು ಪರಾಭವಗೊಂಡರು. ಮೊದಲ ಗೇಮ್‌ನಲ್ಲಿ ಜಯಿಸಿದ್ದ ಸಿಂಧು, ನಂತರದ 2 ಗೇಮ್‌ಗಳನ್ನು ಸುಲಭವಾಗಿ ಬಿಟ್ಟುಕೊಟ್ಟರು. ಗುರುವಾರ ನಡೆಯಲಿರುವ 2ನೇ ಪಂದ್ಯದಲ್ಲಿ ಚೀನಾದ ಚೆನ್ ಯೂಫೀ ವಿರುದ್ಧ ಸೆಣಸಲಿದ್ದಾರೆ. ಈ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಸೋಲುಂಡರೆ, ಸೆಮಿಫೈನಲ್ ಪ್ರವೇಶಿಸುವ ಕನಸು ನುಚ್ಚುನೂರಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.