ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಹಂಗಾಗಿ ಅಧ್ಯಕ್ಷರಾಗಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಆಯ್ಕೆಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು(ಮಾ.10): ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಹಂಗಾಮಿ ಅಧ್ಯಕ್ಷರನ್ನಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಕಾರ್ಯರ್ಕಾರಿ ಸಮಿತಿ ಸಭೆಯಲ್ಲಿ ಪರಮೇಶ್ವರ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿರ್ಣಯ ಕೈಗೊಳ್ಳಲಾಯಿತು ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮುತ್ತಪ್ಪ ರೈ ನಿಧನರಾದ ನಂತರ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಮುತ್ತಪ್ಪ ರೈಗೆ ಮೊದಲು ಪರಮೇಶ್ವರ್ ಅವರೇ ಅಧ್ಯಕ್ಷರಾಗಿದ್ದರು.
ಪರಮೇಶ್ವರ್ ಅಲಂಕರಿಸಿದ ಸ್ಥಾನಕ್ಕೆ ಮುತ್ತಪ್ಪ ರೈ ಅಧ್ಯಕ್ಷ?
2018ರವರೆಗೂ 14 ವರ್ಷಗಳ ಕಾಲ ಜಿ ಪರಮೇಶ್ವರ್ ಅವರೇ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದಾದ ಬಳಿಕ 2018ರಲ್ಲಿ ಮುತ್ತಪ್ಪ ರೈ ಈ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ಮುತ್ತಪ್ಪ ರೈ ಅಕಾಲಿಕ ನಿಧನ ಹೊಂದಿದ್ದರಿಂದ ಮತ್ತೆ ಡಾ. ಜಿ. ಪರಮೇಶ್ವರ್ ಮತ್ತೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.