
ಪ್ಯಾರಿಸ್(ಜೂ.28): ಭಾರತದ ತಾರಾ ಆರ್ಚರಿ ಪಟು ದೀಪಿಕಾ ಕುಮಾರಿ ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಸ್ಟೇಜ್ 3ನಲ್ಲಿ ಭಾನುವಾರ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಟೂರ್ನಿಯಲ್ಲಿ ಭಾರತ 4 ಚಿನ್ನದ ಪದಕ ಜಯಿಸಿದ್ದು, ಟೋಕಿಯೋ ಒಲಿಂಪಿಕ್ಸ್‌ಗೂ ಮುನ್ನ ಭಾರತದ ಆರ್ಚರ್‌ಗಳು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ.
ಮಹಿಳೆಯರ ವೈಯಕ್ತಿಕ ರೀಕರ್ವ್ ವಿಭಾಗದ ಫೈನಲ್‌ನಲ್ಲಿ 27 ವರ್ಷದ ರಾಂಚಿ ಮೂಲದ ದೀಪಿಕಾ ರಷ್ಯಾದ ಎಲೆನಾ ಒಸಿಪೊವಾ ವಿರುದ್ಧ 6-0 ಅಂತರದಲ್ಲಿ ಗೆಲುವು ಸಾಧಿಸಿದರು. ಮಹಿಳೆಯರ ರೀಕರ್ವ್ ವಿಭಾಗದಲ್ಲಿ ದೀಪಿಕಾ, ಅಂಕಿತಾ ಹಾಗೂ ಕೋಮಾಲಿಕಾ ಅವರನ್ನೊಳಗೊಂಡ ತಂಡ ಚಿನ್ನ ಗೆದ್ದರೆ, ಮಿಶ್ರ ವಿಭಾಗದಲ್ಲಿ ತಮ್ಮ ಪತಿ ಅತನು ದಾಸ್ ಜೊತೆ ಸೇರಿ ದೀಪಿಕಾ ಸ್ವರ್ಣಕ್ಕೆ ಗುರಿಯಿಟ್ಟರು.
ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದರೆ 3 ಕೋಟಿ ರೂ ಬಹುಮಾನ: ತಮಿಳುನಾಡು ಸಿಎಂ ಸ್ಟಾಲಿನ್
ಆರ್ಚರಿ ವಿಶ್ವಕಪ್ ಇತಿಹಾಸದಲ್ಲಿ ದೀಪಿಕಾ ಕುಮಾರಿ ಇದುವರೆಗೂ 9 ಚಿನ್ನ, 12 ಬೆಳ್ಳಿ ಹಾಗೂ 7 ಕಂಚಿನ ಪದಕಗಳಿಗೆ ಕೊರಳೊಡ್ಡಿದ್ದಾರೆ. ಸದ್ಯ ನಂ.1 ಶ್ರೇಯಾಂಕ್ಕೇರಿರುವ ದೀಪಿಕಾ ಕುಮಾರಿ ಮುಂಬರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆಲ್ಲಲಿ ಎನ್ನುವುದು ಕೋಟ್ಯಾಂತರ ದೇಶವಾಸಿಗಳ ಹಾರೈಕೆಯಾಗಿದೆ. ಶನಿವಾರ ರಾತ್ರಿ ಪುರುಷರ ಕಾಂಪೌಂಡ್ ವಿಭಾಗದಲ್ಲಿ ಅಭಿಷೇಕ್ ವರ್ಮಾ ಚಿನ್ನದ ಪದಕ ಗೆದ್ದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.