
ಪ್ಯಾರಿಸ್[ಅ.25]: ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್, ಇಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
ಫ್ರೆಂಚ್ ಓಪನ್: ದ್ವಿತೀಯ ಸುತ್ತಿಗೇರಿದ ಸೈನಾ
ಗುರುವಾರ ನಡೆದ ಮಹಿಳಾ ಸಿಂಗಲ್ಸ್ ಪ್ರಿ ಕ್ವಾರ್ಟರ್‌ನಲ್ಲಿ ಸೈನಾ, ಡೆನ್ಮಾರ್ಕ್’ನ ಹೊಜ್ಮಾರ್ಕ್ ಕ್ಜೇಸ್‌ಫೆಲ್ಟ್ ವಿರುದ್ಧ 21-10, 21-11 ಗೇಮ್‌ಗಳಲ್ಲಿ ಜಯಿಸಿದರು. ಕ್ವಾರ್ಟರ್‌ನಲ್ಲಿ ಸೈನಾ, ಕೊರಿಯಾದ ಅನ್ ಸೆ ಯಂಗ್‌ರನ್ನು ಎದುರಿಸಲಿದ್ದಾರೆ. ಮತ್ತೊಂದು ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಸಿಂಧು, ಸಿಂಗಾಪುರದ ಜಿಯಾ ಮಿನ್ ಯಿಯೊ ಎದುರು 21-10, 21-13 ಗೇಮ್‌ಗಳಲ್ಲಿ ಗೆದ್ದು ಅಂತಿಮ 8ರ ಘಟ್ಟಕ್ಕೇರಿದರು.
ವಿಜಯ್ ಹಜಾರೆ ಟ್ರೋಫಿ ಫೈನಲ್: ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ಕೆ
ಚಿರಾಗ್-ಸಾತ್ವಿಕ್‌ಗೆ ಜಯ: ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ, ವಿಶ್ವ ಚಾಂಪಿಯನ್ ಜೋಡಿಯಾದ ಇಂಡೋನೇಷ್ಯಾದ ಅಹಸಾನ್ ಮತ್ತು ಸೆಟಿವಾನ್ ವಿರುದ್ಧ 21-18, 18-21, 21-13 ಗೇಮ್‌ಗಳಲ್ಲಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದರು. ಭಾರತೀಯ ಜೋಡಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.