* ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಏಕೈಕ ಭಾರತೀಯ ನೀರಜ್ ಚೋಪ್ರಾ
* ಕ್ರೆಡ್ ಹೊಸ ಜಾಹೀರಾತಿನಲ್ಲಿ ಮಿಂಚಿದ ಜಾವೆಲಿನ್ ತಾರೆ ನೀರಜ್
* ನೀರಜ್ ಜಾಹೀರಾತಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ನವದೆಹಲಿ(ಸೆ.20): ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, ಅದರ ವಿಡಿಯೋ ವೈರಲ್ ಆಗಿದೆ.
ಕ್ರೆಡಿಟ್ ಕಾರ್ಡ್ ಪಾವತಿ ಆ್ಯಪ್ ಆಗಿರುವ ಕ್ರೆಡ್ ಜಾಹೀರಾತಿನಲ್ಲಿ ಚೋಪ್ರಾ ಕಾಣಿಸಿಕೊಂಡಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗರಾದ ರಾಹುಲ್ ಡ್ರಾವಿಡ್, ಜಾವಗಲ್ ಶ್ರೀನಾಥ್ ಹಾಗೂ ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಈ ಮೊದಲು ಇದೇ ಕಂಪೆನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರ ಸಾಲಿಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿಕೊಂಡಿದ್ದಾರೆ. ಟೋಕಿಯೋದಿಂದ ಹಿಂದಿರುಗಿದ ಬಳಿಕ ಚೋಪ್ರಾ ಅವರ ಬ್ರ್ಯಾಂಡ್ ಮೌಲ್ಯ ಕನಿಷ್ಠ ಹತ್ತು ಪಟ್ಟು ಹೆಚ್ಚಾಗಿದ್ದು, ಈಗಾಗಲೇ ಅವರು ಹಲವು ಕಂಪೆನಿಗಳ ಜೊತೆ ಜಾಹೀರಾತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
360 Degree Marketing! pic.twitter.com/RmjWAXERxm
— Neeraj Chopra (@Neeraj_chopra1)
ತಂದೆ-ತಾಯಿ ವಿಮಾನ ಹತ್ತಿಸಿ ಕನಸು ನನಸು ಮಾಡಿದ ಚಿನ್ನದ ಹುಡುಗ ನೀರಜ್ ಚೋಪ್ರಾ
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು. ಇದರೊಂದಿಗೆ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎನ್ನುವ ಗೌರವಕ್ಕೆ ನೀರಜ್ ಚೋಪ್ರಾ ಪಾತ್ರರಾಗಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಚಿನ್ನ, ಎರಡು ಬೆಳ್ಳಿ ಸೇರಿ 7 ಪದಕಗಳನ್ನು ಜಯಿಸಿತ್ತು. ಒಲಿಂಪಿಕ್ಸ್‌ನ ವೈಯುಕ್ತಿಕ ವಿಭಾಗದಲ್ಲಿ ಅಭಿನವ್ ಬಿಂದ್ರಾ ಬಳಿಕ ದೇಶಕ್ಕೆ ಚಿನ್ನ ಗೆದ್ದ ಎರಡನೇ ಸಾಧಕ ಎನ್ನುವ ಹಿರಿಮೆ ಕೂಡಾ ನೀರಜ್ ಪಾಲಾಗಿದೆ.