Neeraj Chopra Birthday: ಚಿನ್ನದ ಹುಡುಗ ನೀರಜ್ ಚೋಪ್ರಾಗಿಂದು 24ನೇ ಹುಟ್ಟುಹಬ್ಬದ ಸಂಭ್ರಮ

Suvarna News   | Asianet News
Published : Dec 24, 2021, 05:55 PM IST
Neeraj Chopra Birthday: ಚಿನ್ನದ ಹುಡುಗ ನೀರಜ್ ಚೋಪ್ರಾಗಿಂದು 24ನೇ ಹುಟ್ಟುಹಬ್ಬದ ಸಂಭ್ರಮ

ಸಾರಾಂಶ

* ಚಿನ್ನದ ಹುಡುಗ ನೀರಜ್ ಚೋಪ್ರಾಗಿಂದು 24ನೇ ಹುಟ್ಟುಹಬ್ಬದ ಸಂಭ್ರಮ * ನೀರಜ್ ಚೋಪ್ರಾ ಹುಟ್ಟುಹಬ್ಬಕ್ಕೆ ಹರಿದು ಬಂತು ಶುಭಾಶಯಗಳ ಮಹಾಪೂರ * ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿರುವ ನೀರಜ್ ಚೋಪ್ರಾ

ಬೆಂಗಳೂರು(ಡಿ.24): ಟೋಕಿಯೋ ಒಲಿಂಪಿಕ್ಸ್‌ (Tokyo Olympics) ಚಿನ್ನದ ಪದಕ ವಿಜೇತ ಜಾವೆಲಿನ್ ಥ್ರೋ (Javelin Throw) ಪಟು ನೀರಜ್ ಚೋಪ್ರಾ ಶುಕ್ರವಾರವಾದ ಇಂದು(ಡಿ.24) ತಮ್ಮ 24ನೇ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಂಡಿದ್ದಾರೆ. ನೀರಜ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಹರ್ಯಾಣದ ಪಾಣಿಪತ್ ಮೂಲದ ನೀರಜ್‌ ಚೋಪ್ರಾ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ.

ಶತಮಾನಗಳ ಬಳಿಕ ಭಾರತವು ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್‌ನಲ್ಲಿ ವಿಭಾಗದಲ್ಲಿ ಪದಕ ಗೆದ್ದುಕೊಟ್ಟಿದ್ದರು. ಇನ್ನು ವೈಯುಕ್ತಿಕ ವಿಭಾಗದಲ್ಲಿ ಅಭಿನವ್ ಬಿಂದ್ರಾ (Abhinav Bindra) ಬಳಿಕ ದೇಶದ ಪರವಾಗಿ ಚಿನ್ನದ ಗೆದ್ದ ಎರಡನೇ ಕ್ರೀಡಾಪಟು ಎನ್ನುವ ಕೀರ್ತಿಗೆ ನೀರಜ್ ಚೋಪ್ರಾ ಭಾಜನರಾಗಿದ್ದರು.

ನೀರಜ್‌ ಚೋಪ್ರಾ ಆಗಸ್ಟ್‌ 07, 2021ರಂದು ನಡೆದ ಜಾವೆಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ 87.58 ಮೀಟರ್ ದೂರ ಎಸೆಯುವ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ ಬಳಿಕ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪದಕಗಳನ್ನು ಜಯಿಸಿದ್ದಾರೆ.

ನೀರಜ್ ಚೋಪ್ರಾ 2017ರಲ್ಲಿ ಜೂನಿಯರ್ ಕಮಿಷನ್‌ ಆಫಿಸರ್ ಆಗಿ ಭಾರತೀಯ ಸೇನೆಗೆ (Indian Army) ಸೇರ್ಪಡೆಯಾಗಿದ್ದರು. ಸದ್ಯ ನೀರಜ್ ಚೋಪ್ರಾ ಭಾರತೀಯ ಸೇನೆಯಲ್ಲಿ ನೈಬ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.  2018ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಇನ್ನು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ ಬಳಿಕ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ(Khel Ratna Award) ನೀರಜ್ ಚೋಪ್ರಾ ಭಾಜನರಾಗಿದ್ದರು. ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತವು ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕ ಸಹಿತ ಏಳು ಪದಕಗಳನ್ನು ಜಯಿಸಿತ್ತು.  

ಸದ್ಯ ನೀರಜ್‌ ಚೋಪ್ರಾ ಅಮೆರಿಕದಲ್ಲಿ ಜಾವಲಿನ್ ಥ್ರೋ ಅಭ್ಯಾಸ ನಡೆಸುತ್ತಿದ್ದಾರೆ. ಮುಂಬರುವ 2022ರ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್‌(2022 World Athletics Championships), ಕಾಮನ್‌ವೆಲ್ತ್ ಗೇಮ್ಸ್‌(Commonwealth Games), ಏಷ್ಯನ್‌ ಗೇಮ್ಸ್‌ಗೆ(Asian Games) ಸಿದ್ದತೆ ನಡೆಸುತ್ತಿದ್ದಾರೆ.

ಕೊಟ್ಟ ಮಾತು ಉಳಿಸಿದ ಮಹೀಂದ್ರಾ: ಚಿನ್ನದ ಹುಡುಗ ನೀರಜ್‌ಗೆ ದುಬಾರಿ ಗಿಫ್ಟ್!

ನೀರಜ್ ಚೋಪ್ರಾ ಹುಟ್ಟುಹಬ್ಬಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari), ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್‌ ಕಟ್ಟರ್(Manohar Lal Khattar), ಭಾರತ ಮಹಿಳಾ ಹಾಕಿ ತಂಡದ ರಾಣಿ ರಾಂಪಾಲ್, ಯೋಗೇಶ್ವರ್ ದತ್, ಸೋನಮ್‌ ಮಲಿಕ್‌ ಸೇರಿದಂತೆ ಹಲವರು ಟ್ವೀಟ್‌ ಮೂಲಕ ಜನ್ಮದಿನದ ಶುಭ ಹಾರೈಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ 2020 ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆರೋಗ್ಯಯುತ ಹಾಗೂ ದೀರ್ಘಾ ಆಯಸ್ಸು ನಿಮ್ಮದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ನಿತಿನ್ ಗಡ್ಕರಿ ಟ್ವೀಟ್‌ ಮಾಡಿದ್ದಾರೆ.  

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ ಹರ್ಯಾಣದ ಪುತ್ರ ನೀರಜ್ ಚೋಪ್ರಾ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಮನೋಹರ್ ಲಾಲ್ ಕಟ್ಟರ್ ಟ್ವೀಟ್ ಮಾಡಿದ್ದಾರೆ

ಇನ್ನು ಭಾರತ ಮಹಿಳಾ ಹಾಕಿ ತಂಡದ ನಾಯಕಿ, ರಾಣಿ ರಾಂಪಾಲ್‌, ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಚಾಂಪಿಯನ್ ನೀರಜ್‌ ಚೋಪ್ರಾ ಎಂದು ಟ್ವೀಟ್‌ ಮಾಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!