
ಗ್ಲಾಸ್ಗೋ (ಜು.26) ಕಾಮನ್‌ವೆಲ್ತ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತ ಮೊದಲ ಚಿನ್ನದ ಪದಕ ಸಾಧನೆ ಮಾಡಿದೆ. ವೈಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಸಾಧನೆ ಮಾಡಿದ್ದಾರೆ. 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಚಿನ್ನ ಗೆದ್ದಿದ್ದಾರೆ. ಮೊದಲ ಪ್ರಯತ್ನದಲ್ಲೇ 82 ಕೆಜಿ ತೂಕ ಎತ್ತಿದ ಮೀರಾಬಾಯಿ ಚಾನು ಪ್ರತಿಸ್ಪರ್ಧಿಗಳಿಗೆ ಆರಂಭದಲ್ಲೇ ಶಾಕ್ ನೀಡಿದರು. ಒಟ್ಟು 190 ಕೆಜಿ ಭಾರ ಎತ್ತುವ ಮೂಲಕ ಮೀರಾ ಬಾಯಿ ಚಿನ್ನದ ಪದಕ್ಕೆ ಮುತ್ತಿಕ್ಕಿದ್ದಾರೆ.
2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಮೀರಾಬಾಯಿ ಚಾನು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಕಾಮಲ್‌ವೆಲ್ತೇ ಗೇಮ್ಸ್‌ನಲ್ಲಿ ಸತತವಾಗಿ ಮೂರು ಚಿನ್ನದ ಪದಕ ಸಾಧನೆ ಮಾಡಿದ್ದಾರೆ. 2022 ಹಾಗೂ 2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಸಾಧನೆ ಮಾಡಿದ್ದಾರೆ.
ಮೀರಾಬಾಯಿ ಚಾನು ಚಿನ್ನದ ಪದಕದ ಸಾಧನೆಯೊಂದಿಗೆ ಒಟ್ಟು ನಾಲ್ಕನೇ ಪದಕ ಸಾಧನೆ ಮಾಡಿದೆ. ಲೋವ್ಲಿನಾ ಬೊರ್ಗೊಹೈನ್, ಜಂದು ಕುಮಾರ್, ರಿಷಿಕಾಂತ್ ಸಿಂಗ್ ಪದಕ ಸಾಧನೆ ಮಾಡಿದ್ದಾರೆ. ಇದೀಗ ಮೀರಾಬಯಿ ಚಾನು ಭಾರತಕ್ಕೆ ಚಿನ್ನದ ಕಿರೀಟ ತೊಡಿಸಿದ್ದಾರೆ. ಮೀರಾಬಾಯಿ ಚಾನುಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಮೀರಾಬಾಯಿ ಚಾನು ಭಾರತದ ಚಿನ್ನದ ರಾಣಿಯಾಗಿ ಗುರುತಿಸಿಕೊಂಡಿದ್ದಾರೆ. 2026ರ ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಕಳೆದ ಮೂರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ 2ನೇ ವೈಟ್‌ಲಿಫ್ಟರ್ ದಾಖಲೆ ಬರೆದಿದ್ದರು. 2017, 2022 ಹಾಗೂ 2025ರ ವಿಶ್ವ ಚಾಂಪಿಯನ್‌ಶಿಪ್ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದಿದ್ದಾರೆ. 2014ರ ಗ್ಲಾಸ್ಗೋ ಗೇಮ್ಸ್‌ನಲ್ಲಿ ಬೆಳ್ಳಿ, 2021ರ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಮೀರಾಬಾಯಿ ಚಾನು ಅದ್ವಿತೀಯ ಸಾಧನೆಗೆ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇನ್ನು ಪದ್ಮ ಶ್ರೀ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.