
ಹೈದ್ರಾಬಾದ್(ಏ.07): ಕೊರೋನಾದಿಂದಾಗಿ ಟೋಕಿಯೋ ಒಲಿಂಪಿಕ್ಸ್ 1 ವರ್ಷ ಮುಂದೂಡಿಕೆಯಾಗಿರುವುದರಿಂದ ಭಾರತದ ತಾರಾ ಶಟ್ಲರ್ ಪಿ.ವಿ. ಸಿಂಧು 2022ರವರೆಗೂ ವಿಶ್ವ ಚಾಂಪಿಯನ್ ಆಗಿ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
2ನೇ ಮಹಾಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಟೂರ್ನಿ ಕೊರೋನಾಗೆ ರದ್ದು!
ಸಿಂಧು, ಕಳೆದ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಈ ಶ್ರೇಯಕ್ಕೆ ಪಾತ್ರರಾಗಿದ್ದರು. ಈ ಕೂಟದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಶಟ್ಲರ್ ಎಂಬ ಹೆಗ್ಗಳಿಕೆ ಕೂಡ ಸಿಂಧು ಅವರದ್ದಾಗಿತ್ತು. 2021ರಲ್ಲಿ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುವುದರಿಂದ ಅದೇ ವರ್ಷ ವಿಶ್ವ ಬ್ಯಾಡ್ಮಿಂಟನ್ ಟೂರ್ನಿ ನಡೆಯುವುದು ಅನುಮಾನವಾಗಿದೆ. ಹೀಗಾಗಿ ಸಿಂಧು 3 ವರ್ಷಗಳ ಕಾಲ ವಿಶ್ವ ಚಾಂಪಿಯನ್ ಎನಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬ್ಯಾಡ್ಮಿಂಟನ್ ಆಟಗಾರರಿಗೆ ಪುಲ್ಲೇಲಾ ಗೋಪಿಚಂದ್ ವಾಟ್ಸ್‌ಆ್ಯಪ್‌ನಲ್ಲಿ ಪಾಠ
ಸದ್ಯ ಸಿಂದು ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಭಾಗವಹಿಸಿ ತವರಿಗೆ ಮಾರ್ಚ್ 15ರಂದು ಬಂದಿದ್ದರು. ಕೊರೋನಾ ಭೀತಿ ಮುನ್ನೆಚ್ಚರಿಕಾ ಕ್ರಮವಾಗಿ ಸಿಂಧು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿದ್ದರು. ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಬಂದು ಕ್ವಾರಂಟೈನ್ ಅವಧಿಯನ್ನು ಏಪ್ರಿಲ್ 5ರವರೆಗೆ ವಿಸ್ತರಿಸಿದ್ದಾರೆ. ಜೊತೆಗೆ ನನ್ನ ಪಾಸ್‌ಪೋರ್ಟ್ ವಶಕ್ಕೆ ಪಡೆದಿದ್ದು, ಮನೆಯ ಮುಂದೆ ಕ್ವಾರಂಟೈನ್ ಸ್ಟಿಕ್ಕರ್ ಅಂಟಿಸಿದ್ದಾರೆ. ಇಂಗ್ಲೆಂಡ್‌ನಿಂದ ಬಂದ ನನ್ನ ಸ್ನೇಹಿತರನ್ನು ವಿಚಾರಿಸಿದಾಗ ಅವರಿಗೂ ಇದೇ ಪರಿಸ್ಥಿತಿ ಎದುರಾಗಿರುವುದು ತಿಳಿಸಿದ್ದಾರೆಂದು ಸಿಂಧು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.