ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಯೋಗಕ್ಷೇಮ ವಿಚಾರಿಸಿದ ಪ್ರಧಾನಿ ಮೋದಿ

By Suvarna NewsFirst Published Jun 4, 2021, 12:36 PM IST
Highlights

* ಮಿಲ್ಖಾ ಸಿಂಗ್ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

* ಮಿಲ್ಖಾ ಸಿಂಗ್‌ಗೆ ಕೋವಿಡ್‌ ಪಾಸಿಟಿವ್, ಆಸ್ಪತ್ರೆಗೆ ದಾಖಲು

* ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಿಲ್ಖಾ ಸಿಂಗ್

ನವದೆಹಲಿ(ಜೂ.04): ಕೋವಿಡ್‌ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇಶದ ದಿಗ್ಗಜ ಅಥ್ಲೀಟ್‌ ಮಿಲ್ಖಾ ಸಿಂಗ್ ಅವರ ಯೋಗ ಕ್ಷೇಮವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಮಿಲ್ಖಾ ಸಿಂಗ್ ಆದಷ್ಟು ಬೇಗ ಗುಣಮುಖರಾಗಿ, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಅಥ್ಲೀಟ್‌ಗಳಿಗೆ ಆರ್ಶಿವದಿಸುವಂತಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ದಿಗ್ಗಜ ಅಥ್ಲೀಟ್‌ ಮಿಲ್ಖಾ ಸಿಂಗ್ ಅವರಿಗೆ ಮೇ 20ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಇದಾದ ಕೆಲ ದಿನಗಳ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮೊಹಾಲಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಿಲ್ಖಾ ಸಿಂಗ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತುರ್ತು ನಿಗಾ ಘಟಕ(ಐಸಿಯು)ದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಮಿಲ್ಖಾ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿಗೂ ಕೋವಿಡ್ ಪಾಸಿಟಿವ್

ಇನ್ನು ಮಿಲ್ಖಾ ಸಿಂಗ್ ಪತ್ನಿ ನಿರ್ಮಾಲಾ ಕೌರ್ ಅವರಿಗೂ ಕೋವಿಡ್ 19 ಸೋಂಕು ತಗುಲಿದೆ. ಅವರಿಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. 

ತಮ್ಮ ತಂದೆಗೆ ಕೋವಿಡ್‌ ತಗುಲಿರುವ ವಿಚಾರ ತಿಳಿಯುತ್ತಿದ್ದಂತೆಯೇ ದುಬೈನಲ್ಲಿ ನೆಲೆಸಿರುವ ಗ್ಯಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ಕಳೆದವಾರವಷ್ಟೇ ಚಂಡೀಗಢಕ್ಕೆ ಬಂದಿಳಿದಿದ್ದರು. ಅಮೆರಿಕದಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಿಲ್ಖಾ ಸಿಂಗ್ ಮಗಳು ಮೋನಾ ಮಿಲ್ಖಾ ಸಿಂಗ್ ಕೂಡಾ ತಂದೆ-ತಾಯಿಯ ಸೇವೆಗಾಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"

 

click me!