ಕುಸ್ತಿಯಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಪ್ರಿಯಾ ಮಲಿಕ್‌..!

Published : Jul 25, 2021, 02:54 PM IST
ಕುಸ್ತಿಯಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಪ್ರಿಯಾ ಮಲಿಕ್‌..!

ಸಾರಾಂಶ

* ಅಂತರಾಷ್ಟ್ರೀಯ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಪ್ರಿಯಾ ಮಲಿಕ್‌ * ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪ್ರಿಯಾ ಮಲಿಕ್‌ಗೆ ಒಲಿದ ಚಿನ್ನ * ಒಲಿಂಪಿಕ್ಸ್‌ನಲ್ಲಿ ಭಾರತ ಪ್ರತಿನಿಧಿಸುವ ಕನಸು ಕಾಣುತ್ತಿರುವ ಪ್ರಿಯಾ

ಹಂಗೇರಿ(ಜು.25): ಒಂದು ಕಡೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದ್ದಾರೆ. ಇಂದು ಭಾರತದ ಮತ್ತೊಬ್ಬ ಕುಸ್ತಿ ತಾರೆ ಪ್ರಿಯಾ ಮಲಿಕ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಹೌದು, ಹಂಗೇರಿಯಾದಲ್ಲಿ ನಡೆಯುತ್ತಿರುವ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ಪ್ರಿಯಾ ಮಲಿಕ್‌ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರವಷ್ಟೇ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಚಾನು 49 ಕೆ.ಜಿ. ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 202 ಕೆ.ಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದರು. ಇದೀಗ ದಿನ ಬೆಳಗಾಗುವಷ್ಟರಲ್ಲಿ ಪ್ರಿಯಾ ಮಲಿಕ್‌ ಕುಸ್ತಿ ಅಖಾಡದಲ್ಲಿ ಭಾರತದ ಬಾವುಟ ಮಿನುಗುವಂತೆ ಮಾಡಿದ್ದಾರೆ.

ಟೋಕಿಯೋ 2020: ಬಲಿಷ್ಠ ಪಂಚ್‌ಗಳ ಮೂಲಕ ಶುಭಾರಂಭ ಮಾಡಿದ ಬಾಕ್ಸರ್ ಮೇರಿ ಕೋಮ್‌

73 ಕೆ.ಜಿ ವಿಭಾಗದ ಕುಸ್ತಿ ಫೈನಲ್‌ನಲ್ಲಿ ಪ್ರಿಯಾ ಮಲಿಕ್ 5-0 ಬೌಟ್ ಅಂಕಗಳ ಅಂತರದಲ್ಲಿ ಕ್ಸಿನಿಯಾ ಪಟಪೋವಿಚ್ ಅವರನ್ನು ಮಣಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ದಿದ್ದಾರೆ. ಹರ್ಯಾಣದ ಜಿಂದ್ ಜಿಲ್ಲೆಯ ಕುಸ್ತಿಪಟುವಾಗಿರುವ ಪ್ರಿಯಾ ಮಲಿಕ್‌ ಚೌಧರಿ ಭಾರತ ಸಿಂಹ ಮೆಮೊರಿಯಲ್‌ ಕ್ರೀಡಾಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಮುಂದಿನ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆಲ್ಲುವ ಕನಸು ಕಾಣುತ್ತಿದ್ದಾರೆ ಪ್ರಿಯಾ ಮಲಿಕ್‌.

ಭಾರತದ ಭವಿಷ್ಯದ ಕುಸ್ತಿ ತಾರೆ ಪ್ರಿಯಾ ಮಲಿಕ್ ಅವರ ಸಾಧನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Asian Games 2026: ಕೊನೆಯ ಕ್ಷಣದವರೆಗೂ ಜಿದ್ದಾಜಿದ್ದಿ; ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಚಿನ್ನದ ಕಿರೀಟ!
ಕಬಡ್ಡಿಯಲ್ಲಿ ಭಾರತಕ್ಕೆ ಚಿನ್ನದ ಪದಕ, ರೋಚಕ ಪಂದ್ಯದಲ್ಲಿ ಇರಾನ್ ವಿರುದ್ಧ ಭರ್ಜರಿ ಗೆಲುವು