ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಿ.ವಿ. ಸಿಂಧು ಸೋಲಿನೊಂದಿಗೆ ಭಾರತದ ಹೋರಾಟ ಅಂತ್ಯವಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
ಜಕಾರ್ತ(ಜ.17): ಭಾರತದ ತಾರಾ ಶಟ್ಲರ್ ಪಿ.ವಿ. ಸಿಂಧು, ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೋಲುಂಡು ಹೊರಬಿದ್ದಿದ್ದಾರೆ. ಸಿಂಧು ಸೋಲಿನೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.
Sayaka Takahashi beat Pusarla V Sindhu 16-21 21-16 21-19 to enter the quarterfinals of the Daihatsu Indonesia Masters. pic.twitter.com/Rs31K2A6Df
— BWF (@bwfmedia)ಇಂಡೋನೇಷ್ಯಾ ಮಾಸ್ಟರ್ಸ್: ಮುನ್ನಡೆದ ಸಿಂಧು, ಸೈನಾ ಔಟ್
2020ರ ಈ ಋುತುವಿನ 2ನೇ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತೀಯ ಶಟ್ಲರ್‌ಗಳ ಸವಾಲು ಪ್ರಿಕ್ವಾರ್ಟರ್ ಹಂತಕ್ಕೆ ಮುಕ್ತಾಯವಾಗಿದೆ. ಸೈನಾ ನೆಹ್ವಾಲ್ ಮೊದಲ ಸುತ್ತಿನಲ್ಲೇ ಆಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು.
ಗುರುವಾರ ನಡೆದ ಮಹಿಳಾ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಸಿಂಧು, ಜಪಾನ್‌ನ ಸಯಾಕ ತಕಹಾಶಿ ವಿರುದ್ಧ 21-16, 16-21, 19-21 ಗೇಮ್‌ಗಳಲ್ಲಿ ಪರಾಭವಗೊಂಡರು. ಸಿಂಧು ವಿರುದ್ಧ ತಕಹಾಶಿಗೆ ಇದು 3ನೇ ಗೆಲುವಾಗಿದೆ.