ಕೆಎಎ ಅಧ್ಯಕ್ಷ ಸ್ಥಾನಕ್ಕೆ ಶೀಘ್ರ​ ರಾಜೀ​ನಾಮೆ: ರೈ

By Suvarna News  |  First Published Jan 21, 2020, 3:03 PM IST

ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..


ರಾಮನ​ಗರ(ಜ.21): ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆ (ಕೆಎಎ) ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡಲಿದ್ದೇನೆ ಎಂದು ಮುತ್ತಪ್ಪ ರೈ ಸೋಮವಾರ ಹೇಳಿದ್ದಾರೆ. 

ಅನಾರೋಗ್ಯದ ಕಾರಣ ಈ ನಿರ್ಧಾರಕ್ಕೆ ಬಂದಿದ್ದು, ಮುಂದಿನ ಅವಧಿಯಲ್ಲಿ ಈ ಹುದ್ದೆಯನ್ನು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್‌ ಅವರು ನಿರ್ವಹಿಸಲಿದ್ದಾರೆ ಎಂದಿದ್ದಾರೆ.

Tap to resize

Latest Videos

ನನ್ನ ಜೊತೆ ಕೆಲಸ ಮಾಡೋರಿಗೆ ಸೈಟ್ ಕೊಡ್ತೇನೆ :ಮುತ್ತಪ್ಪ ರೈ

‘ಈ ಹಿಂದೆ ರಾಮನಗರ ಜಿಲ್ಲಾ ಅಥ್ಲೆಟಿಕ್ಸ್‌ ಸಂಸ್ಥೆಗೆ ಅಧ್ಯಕ್ಷರಾಗಿದ್ದಾಗ ಹಲವು ಬಾರಿ ಅಥ್ಲೆಟಿಕ್ಸ್‌ ಕೂಟಗಳನ್ನು ಆಯೋಜಿಸಿದ್ದೇನೆ. ಆ ವೇಳೆ ಕೆಲವರು ಕೆಎಎ ಅಧ್ಯಕ್ಷರಾಗುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

2018 ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದರು. 

ಟಿಕೆಟ್ ಖಾತ್ರಿಯಾಗಿದೆ, ರೈ ಮಾತಿನ ಒಳಮರ್ಮವೇನು?
 

click me!