
ಗುವಾಹಟಿ(ಜ.13):3ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ 3ನೇ ದಿನವಾದ ಭಾನುವಾರ ಕರ್ನಾಟಕದ ಸೈಕ್ಲಿಸ್ಟ್‌ಗಳು 4 ಪದಕ ಗೆದ್ದಿದ್ದಾರೆ.
ಇದರೊಂದಿಗೆ ಕರ್ನಾಟಕ 2 ಬೆಳ್ಳಿ ಹಾಗೂ 3 ಕಂಚಿನೊಂದಿಗೆ ಒಟ್ಟಾರೆ 5 ಪದಕ ಜಯಿಸಿದ್ದು ಪಟ್ಟಿಯಲ್ಲಿ 19ನೇ ಸ್ಥಾನ ಪಡೆದಿದೆ. ಸೈಕ್ಲಿಂಗ್ ಸ್ಪರ್ಧೆ ಭಾನುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ರಾಜ್ಯದ ಸೈಕ್ಲಿಸ್ಟ್‌ಗಳು ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಅಂಡರ್ 21 ಬಾಲಕರ ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ 30 ಕಿ.ಮೀ. ದೂರವನ್ನು ರಾಜು ಬಾಟಿ 41:05.179 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ಕಂಚಿನ ಪದಕ ಗೆದ್ದರು.
ಅಂಡರ್ 21 ಬಾಲಕಿಯರ ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ 20 ಕಿ.ಮೀ. ದೂರವನ್ನು ಮೇಘಾ ಗುಗಾಡ್ 31:05.423 ನಿಮಿಷಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರು. ಇದೇ ಸ್ಪರ್ಧೆಯಲ್ಲಿ ರಾಜ್ಯದ ಸೌಮ್ಯ ಅಂತಾಪುರ 31:33.206 ನಿಮಿಷಗಳಲ್ಲಿ ಕ್ರಮಿಸಿ ಕಂಚಿನ ಪದಕ ಗೆದ್ದರು. ಅಂಡರ್ 17 ಬಾಲಕರ ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯ 20 ಕಿ.ಮೀ. ದೂರವನ್ನು ಸಂಪತ್ ಪಸಮೆಲ್ 27:55.685 ನಿಮಿಷಗಳಲ್ಲಿ ಗುರಿ ತಲುಪುವ ಮೂಲಕ ಕಂಚು ಜಯಿಸಿದರು.
ಮೂರನೇ ದಿನದಂತ್ಯಕ್ಕೆ 12 ಚಿನ್ನ, 10 ಬೆಳ್ಳಿ ಹಾಗೂ 16 ಕಂಚು ಸಹಿತ 38 ಪದಕಗಳೊಂದಿಗೆ ಮಹರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಡೆಲ್ಲಿ 8 ಚಿನ್ನ, 6 ಬೆಳ್ಳಿ, 9 ಕಂಚಿನೊಂದಿಗೆ 23 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು 7 ಚಿನ್ನ 3 ಬೆಳ್ಳಿ ಹಾಗೂ 6 ಕಂಚಿನ ಪದಕ ಜಯಿಸಿರುವ ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.