ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌: ಫೈನಲ್‌ನಲ್ಲಿ ಮುಗ್ಗರಿಸಿದ ಸಿಂಧು

Published : Mar 08, 2021, 08:58 AM IST
ಸ್ವಿಸ್‌ ಓಪನ್‌  ಬ್ಯಾಡ್ಮಿಂಟನ್‌: ಫೈನಲ್‌ನಲ್ಲಿ ಮುಗ್ಗರಿಸಿದ ಸಿಂಧು

ಸಾರಾಂಶ

ಭಾರತದ ತಾರಾ ಶಟ್ಲರ್ ಪಿ.ವಿ. ಸಿಂಧು ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ಮುಗ್ಗರಿಸಿ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬಾಸೆಲ್(ಮಾ.08)‌: ವಿಶ್ವ ಚಾಂಪಿಯನ್‌ ಪಿ.ವಿ.ಸಿಂಧು ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌ ಫೈನಲ್‌ನಲ್ಲಿ ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಒಲಿಂಪಿಕ್‌ ಚಿನ್ನದ ಪದಕ ವಿಜೇತೆ ಕ್ಯಾರೋಲಿನಾ ಮರಿನ್‌ ವಿರುದ್ಧ 12-21, 5-21 ಗೇಮ್‌ಗಳಲ್ಲಿ ಸೋಲುಂಡರು.

2019ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದ ಭಾರತೀಯ ಆಟಗಾರ್ತಿ ಪಿ.ವಿ. ಸಿಂಧು, ಮರಿನ್‌ರ ವೇಗ ಹಾಗೂ ನಿಖತರೆಯ ಎದುರು ಮಂಕಾದರು. ಕೇವಲ 35 ನಿಮಿಷಗಳಲ್ಲಿ ಪಂದ್ಯ ಮುಕ್ತಾಯಗೊಂಡಿತು. 

ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್: ಸೆಮೀಸ್‌ಗೆ ಸಿಂಧು, ಶ್ರೀಕಾಂತ್

ಮರಿನ್‌ ವಿರುದ್ಧ ಸಿಂಧುಗಿದು ಸತತ 3ನೇ ಸೋಲು: ಕಳೆದ 4 ಪಂದ್ಯಗಳಲ್ಲಿ ಒಂದೇ ಒಂದು ಗೇಮ್‌ನಲ್ಲಿ ಸೋಲದ ಸಿಂಧು ವಿಶ್ವ ನಂ.7 ಸಿಂಧು, ಕಳೆದ 18 ತಿಂಗಳಲ್ಲಿ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದ್ದರು. ಪ್ರಶಸ್ತಿ ಸುತ್ತಿನಲ್ಲಿ ಅವರು ತಮ್ಮ ಶ್ರೇಷ್ಠ ಪ್ರದರ್ಶನ ತೋರುವಲ್ಲಿ ವಿಫಲರಾದರು. ಸಿಂಧು ಮಾ.17ರಿಂದ ನಡೆಯಲಿರುವ ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಲಿಂಪಿಕ್ಸ್‌ನಲ್ಲಿ ಹೆಚ್ಚು ಪದಕ ಗೆಲ್ಲಲು ಭಾರತ ಮಾಡಬೇಕಾದ್ದೇನು? ಪ್ರಧಾನಿ ಮೋದಿ ಮಹತ್ವದ ಸೂತ್ರ
ಕಂಠೀರವ ಸ್ಟೇಡಿಯಂಗೆ ಕ್ರೀಡಾ ಇಲಾಖೆ ಕಾಯಕಲ್ಪ; ಹೊರಾಂಗಣ ಕ್ರೀಡಾಂಗಣದಲ್ಲಿ ಬಹುಕೋಟಿ ರುಪಾಯಿ ವೆಚ್ಚದಲ್ಲಿ ನವೀಕರಣ!