
ನ್ಯೂಯಾರ್ಕ್(ಆ.26): ಯುಎಸ್ ಓಪನ್ ಟೆನಿಸ್ ಗ್ರ್ಯಾನ್ ಸ್ಲಾಂ ಟೂರ್ನಿಯ ಪ್ರಧಾನ ಸುತ್ತಿಗೇರುವಲ್ಲಿ ಭಾರತೀಯ ಆಟಗಾರರು ವಿಫಲರಾಗಿದ್ದಾರೆ. ಪುರುಷರ ಸಿಂಗಲ್ಸ್ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲೇ ಸುಮಿತ್ ನಗಾಲ್ ಹಾಗೂ ರಾಮ್‌ಕುಮಾರ್ ರಾಮನಾಥನ್ ಸೋತು ಹೊರಬಿದ್ದರೆ, ಮಹಿಳಾ ಸಿಂಗಲ್ಸ್‌ನಲ್ಲಿ ಅಂಕಿತಾ ರೈನಾ ಮೊದಲ ಪಂದ್ಯದಲ್ಲೇ ಪರಾಭವಗೊಂಡು ನಿರ್ಗಮಿಸಿದ್ದಾರೆ.
ಆಗಸ್ಟ್ 30ರಿಂದ ಯುಎಸ್ ಓಪನ್ ಗ್ರ್ಯಾನ್ ಸ್ಲಾಂ ಪ್ರಧಾನ ಸುತ್ತು ಆರಂಭಗೊಳ್ಳಲಿದೆ. ಈಗಾಗಲೇ ಯುಎಸ್ ಓಪನ್ ಟೆನಿಸ್ ಟೂರ್ನಿಯಿಂದ ದಿಗ್ಗಜ ಟೆನಿಸಗರಾದ ರೋಜರ್ ಫೆಡರರ್, ರಾಫೆಲ್ ನಡಾಲ್ ಗಾಯದ ಸಮಸ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೀಗ 6 ಯುಎಸ್ ಗ್ರ್ಯಾನ್ ಸ್ಲಾಂ ಒಡತಿ ಸೆರೆನಾ ವಿಲಿಯಮ್ಸ್ ಸಹಾ ಯುಎಸ್ ಓಪನ್ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದಾರೆ. ಸ್ನಾಯು ಸೆಳೆತದಿಂದ ಬಳಲುತ್ತಿರುವ ಸೆರೆನಾ ವಿಲಿಯಮ್ಸ್ ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಕ್ರೀಡಾಕೂಟದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.
ಅಭಿಮಾನಿಗಳಿಗೆ ಶಾಕ್; US ಓಪನ್ ಟೆನಿಸ್‌ನಿಂದ ಹಿಂದೆ ಸರಿದ ಸೆರೆನಾ ವಿಲಿಯಮ್ಸ್!
ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ನಂ.1 ಟೆನಿಸಿಗ ಸರ್ಬಿಯಾದ ನೊವಾಕ್ ಜೋಕೋವಿಚ್ ಯುಎಸ್ ಓಪನ್ ಗ್ರ್ಯಾನ್‌ಸ್ಲಾಂ ಗೆಲ್ಲಬಲ್ಲ ನೆಚ್ಚಿನ ಟೆನಿಸಿಗ ಎನಿಸಿದ್ದಾರೆ. ಈ ಆವೃತ್ತಿಯಲ್ಲಿ ಜೋಕೋವಿಚ್ ಈಗಾಗಲೇ ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್ ಹಾಗೂ ವಿಂಬಲ್ಡನ್ ಗ್ರ್ಯಾನ್ ಸ್ಲಾಂ ಜಯಿಸಿದ್ದು, ನಾಲ್ಕನೇ ಗ್ರ್ಯಾನ್ ಸ್ಲಾಂ ಗೆಲ್ಲುವತ್ತ ಚಿತ್ತ ನೆಟ್ಟಿದ್ದಾರೆ. ರೋಜರ್ ಫೆಡರರ್, ರಾಫೆಲ್ ನಡಾಲ್ ಹಾಗೂ ನೊವಾಕ್ ಜೋಕೋವಿಚ್ ತಲಾ 20 ಗ್ರ್ಯಾನ್ ಸ್ಲಾಂಗಳನ್ನು ಜಯಿಸಿದ್ದಾರೆ. ಯುಎಸ್ ಓಪನ್‌ನಿಂದ ಫೆಡರರ್ ಹಾಗೂ ನಡಾಲ್ ಹಿಂದೆ ಸರಿದಿದ್ದರಿಂದ ಈ ಇಬ್ಬರ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳಲು ಜೋಕೋ ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.