
ಲಂಡನ್(ಜೂ.29): ಪ್ರತಿಷ್ಠಿತ ವಿಂಬಲ್ಡನ್ ಟೆನಿಸ್ ಟೂರ್ನಿ ಸೋಮವಾರ ಆರಂಭಗೊಂಡಿದ್ದು, ಈಚೆಗಷ್ಟೇ ಫ್ರೆಂಚ್ ಓಪನ್ ಗೆದ್ದಿರುವ ವಿಶ್ವದ ನಂ.1 ಆಟಗಾರ, ಸರ್ಬಿಯಾದ ನೊವಾಕ್ ಜೋಕೋವಿಚ್, ಬ್ರಿಟನ್ ಆಟಗಾರ ಆ್ಯಂಡಿ ಮರ್ರೆ ಶುಭಾರಂಭ ಮಾಡಿದ್ದಾರೆ.
ಬ್ರಿಟನ್‌ನ 19 ವರ್ಷದ ಜಾಕ್ ಡ್ರೇಪರ್ ವಿರುದ್ಧ 4-6, 6-1, 6-2, 6-2ರಿಂದ ಗೆದ್ದು 2ನೇ ಸುತ್ತಿಗೆ ಮುನ್ನಡೆದಿದ್ದಾರೆ. ಇನ್ನು 2017ರ ಬಳಿಕ ಇದೇ ಮೊದಲ ಬಾರಿಗೆ ವಿಂಬಲ್ಡನ್ ಸಿಂಗಲ್ಸ್‌ನಲ್ಲಿ ಕಣಕ್ಕಿಳಿದಿದ್ದ ಮರ್ರೆ 6-4, 6-3, 5-7 ಹಾಗೂ 6-3 ಸೆಟ್‌ಗಳಿಂದ ನಿಕಲೋಜ್ ಬಸಿಲಸಿಲ್ವಿಯನ್ನು ಮಣಿಸಿ ಎರಡನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ.
ಸ್ಟೆಫಾನೋಸ್ ಸಿಟ್ಸಿಪಾಸ್‌ಗೆ ಶಾಕ್: ಇತ್ತೀಚೆಗಷ್ಟೇ ಮುಕ್ತಾಯವಾದ ಫ್ರೆಂಚ್ ಓಪನ್ ಸಿಂಗಲ್ಸ್‌ನಲ್ಲಿ ಫೈನಲ್‌ನಲ್ಲಿ ಮುಗ್ಗರಿಸಿದ ಗ್ರೀಸ್‌ನ 22 ವರ್ಷದ ಸ್ಟೆಫಾನೋಸ್ ಸಿಟ್ಸಿಪಾಸ್ ವಿಂಬಲ್ಡನ್ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಅನುಭವಿಸಿದ್ದಾರೆ. ಅಮೆರಿಕದ ಫ್ರಾನ್ಸಸ್ ಟೈಫೋಯಿ 6-4,6-4, 6-3 ನೇರ ಸೆಟ್‌ಗಳಿಂದ ಸ್ಟೆಫಾನೋಸ್ ಸಿಟ್ಸಿಪಾಸ್ ಶರಣಾಗಿದ್ದಾರೆ.
ಇಂದಿನಿಂದ ವಿಂಬಲ್ಡನ್ ಗ್ರ್ಯಾನ್ ಸ್ಲಾಂ ಆರಂಭ; ಜೋಕೋ-ಫೆಡರರ್ ಮೇಲೆ ಚಿತ್ತ
ಈ ಮಧ್ಯೆ, ತಂಡದ ಸಿಬ್ಬಂದಿಯೋರ್ವರಿಗೆ ಕೊರೋನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಬ್ರಿಟನ್‌ನ ತಾರಾ ಆಟಗಾರ್ತಿ ಜೊಹಾನ್ನಾ ಕೊಂಟಾ ಆಡುವ ಮುನ್ನವೇ ಹೊರಬಿದ್ದಿದ್ದಾರೆ.
ಕಳೆದ ವರ್ಷ ಕೊರೋನಾದಿಂದಾಗಿ ಟೂರ್ನಿ ರದ್ದಾಗಿತ್ತು. ಈ ಬಾರಿ ಶೇ.50 ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, ಟೆನಿಸ್ ಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.