
ರೋಮ್(ಜ.18): 2020ನೇ ಹೊಸ ವರ್ಷವನ್ನು ಭಾರತದ ರಸ್ಲರ್ ವಿನೇಶ್ ಫೋಗಟ್ ಭರ್ಜರಿಯಾಗಿ ಆರಂಭಿಸಿದ್ದಾರೆ. ರೋಮ್ ರ‍್ಯಾಂಕಿಂಗ್ ಕುಸ್ತಿ ಸೀರಿಸ್‌ನಲ್ಲಿ ವಿನೇಶ್ ಚಿನ್ನ ಗೆದ್ದುಕೊಂಡಿದ್ದಾರೆ. 53 ಕೆಜಿ ವಿಭಾಗದಲ್ಲಿ ವಿನೇಶ್ ಇಬ್ಬರು ಚೀನಾ ಎದುರಾಳಿಗಳನ್ನು ಮಣಿಸಿದ ವಿನೇಶ್ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ವಿನೇಶ್ ಫೋಗಟ್!
ಗೆಲುವಿನ ಬಳಿಕ ಸಂತಸ ವ್ಯಕ್ತಪಡಿಸಿದ ವಿನೇಶ್, ಒಲಿಂಪಿಕ್ ಕ್ರೀಡಾಕೂಟಕ್ಕೆ ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೇನೆ. ಈ ಗೆಲುವು ನನ್ನ ಆತ್ಮವಿಶ್ವಾಸ ಹೆಚ್ಚಿಸಿದೆ. ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ. ವಿನೇಶ್ ಈಕ್ವೆಡಾರ್‌ನ ಲಿಸಾ ಎಲಿಜಬೆತ್ ವಿರುದ್ಧ ಅದ್ಬುತ ಗೆಲವಿನೊಂದಿಗೆ ಫೈನಲ್ ಸುತ್ತು ಗೆದ್ದುಕೊಂಡರು.
ಫೈನಲ್ ಸುತ್ತಿಗೂ ಮೊದಲು ಉಕ್ರೇನ್‌ನ ಕ್ರೈಸ್ಟಾನಾ ಬೆರೆಝಾ(10-0), ಚೀನಾದ ಲನೌನ್ ಲು(15-5) ಹಾಗೂ ಕ್ವೈನಾ ಪಂಗ್ ವಿರುದ್ಧ 4-2 ಅಂತರದಿಂದ ಗೆಲುವು ಸಾಧಿಸಿದರು. 57 ಕೆಜಿ ವಿಭಾಗದಲ್ಲಿ ಭಾರತದ ಅಂಶು ಮಲಿಕ್ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.