ಬೊಮ್ಮಾಯಿ ಸಂಪುಟಕ್ಕೆ ಮೇಜರ್‌ ಸರ್ಜರಿ: 6 ಸಚಿವರಿಗೆ ಕೊಕ್‌, 10 ಜನ ಸೇರ್ಪಡೆ..?

Published : Apr 05, 2022, 06:33 AM ISTUpdated : Apr 05, 2022, 07:40 AM IST
ಬೊಮ್ಮಾಯಿ ಸಂಪುಟಕ್ಕೆ ಮೇಜರ್‌ ಸರ್ಜರಿ: 6 ಸಚಿವರಿಗೆ ಕೊಕ್‌, 10 ಜನ ಸೇರ್ಪಡೆ..?

ಸಾರಾಂಶ

*  ಯುಗಾದಿ ಮುಗಿದ ಬೆನ್ನಲ್ಲೇ ಸಂಪುಟ ಕಸರತ್ತು ಆರಂಭ *  ವರಿಷ್ಠರ ಒಪ್ಪಿಗೆ ಪಡೆಯಲು ಬೊಮ್ಮಾಯಿ ಇಂದು ದಿಲ್ಲಿಗೆ *  ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿ ಸಂಪುಟ ಸರ್ಜರಿಗೆ ಸಿಎಂ ಒಲವು  

ಬೆಂಗಳೂರು(ಏ.05): ಯುಗಾದಿ ಹಬ್ಬ ಕಳೆದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಪುಟ ಕಸರತ್ತಿಗೆ ಸಂಬಂಧಿಸಿದಂತೆ ಚಟುವಟಿಕೆ ಆರಂಭಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಮಂಗಳವಾರ ಅಥವಾ ಬುಧವಾರ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಮೇಕೆದಾಟು(Mekedatu) ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ನಡೆಸುವ ಅಧಿಕೃತ ಕಾರ್ಯಕ್ರಮ ಮುಂದಿಟ್ಟುಕೊಂಡು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದಾರೆ. ಆದರೆ, ಅವರ ದೆಹಲಿ ಭೇಟಿಯ ಮುಖ್ಯ ಉದ್ದೇಶ ಸಂಪುಟ(Cabinet Expansion) ಕಸರತ್ತಿಗೆ ವರಿಷ್ಠರ ಹಸಿರು ನಿಶಾನೆ ಪಡೆಯುವುದು ಎಂದು ತಿಳಿದು ಬಂದಿದೆ.

ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಯಾಗೋ ಕನಸು ಕಾಣುತ್ತಿದ್ದವರಿಗೆ ಬಿಗ್‌ ಶಾಕ್‌

ಮುಂಬರುವ ವಿಧಾನಸಭಾ ಚುನಾವಣೆಯನ್ನು(Karnataka Assembly Election) ಗಮನದಲ್ಲಿ ಇರಿಸಿಕೊಂಡು ಸಂಪುಟಕ್ಕೆ ಸರ್ಜರಿ ಮಾಡುವ ಉದ್ದೇಶವನ್ನು ಬೊಮ್ಮಾಯಿ ಹೊಂದಿದ್ದಾರೆ. ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿಯಿವೆ. ನಾಲ್ಕರಿಂದ ಆರು ಮಂದಿ ಹಾಲಿ ಸಚಿವರನ್ನು ಕೈಬಿಡುವ ಮೂಲಕ ಹೆಚ್ಚೂ ಕಡಮೆ ಹತ್ತು ಮಂದಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ.

ಈಗಿರುವ ಸಂಪುಟ ಸದಸ್ಯರ ಅರ್ಧ ಭಾಗ ಅನ್ಯ ಪಕ್ಷಗಳಿಂದ ವಲಸೆ ಬಂದವರೇ ಇದ್ದಾರೆ. ಅವರನ್ನು ಕೈಬಿಡುವ ಯೋಚನೆ ಮುಖ್ಯಮಂತ್ರಿಗಳಿಗಿಲ್ಲ. ಇನ್ನುಳಿದವರ ಪೈಕಿ ಹಲವರು ಕೆಲವು ತಿಂಗಳುಗಳ ಹಿಂದೆ ಹೊಸದಾಗಿ ಸಂಪುಟ ಸೇರ್ಪಡೆಯಾದವರು. ಹೀಗಾಗಿ, ಅಂತಿಮವಾಗಿ ಸಂಪುಟ ಕಸರತ್ತಿನ ಬಗ್ಗೆ ಪಕ್ಷದ ವರಿಷ್ಠರ ಸಲಹೆ ಸೂಚನೆಗಳನ್ನು ಆಲಿಸಿ ಮುಖ್ಯಮಂತ್ರಿಗಳು ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಆಕಾಂಕ್ಷಿಗಳೂ ದೆಹಲಿಗೆ ದೌಡು:

ಮುಖ್ಯಮಂತ್ರಿಗಳ ದೆಹಲಿ ಪ್ರಯಾಣದ ವೇಳಾಪಟ್ಟಿ ಹೊರಬಿದ್ದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. ಅಲ್ಲದೆ, ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿರುವ ಕೆಲವು ಹಿರಿಯ ಸಚಿವರು ಕೂಡ ದೆಹಲಿಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಾರಕಿಹೊಳಿ, ಯೋಗೇಶ್ವರ್‌ಗೆ ಅವಕಾಶ?

ಅತ್ಯಾಚಾರ(Rape Case) ಆರೋಪ ಪ್ರಕರಣದಲ್ಲಿ ಸಿಲುಕಿ ಖುಲಾಸೆಯಾಗಿರುವ ಮಾಜಿ ರಮೇಶ್‌ ಜಾರಕಿಹೊಳಿ(Ramesh Jarkiholi) ಅವರು ಮತ್ತೆ ಸಚಿವ ಸಂಪುಟ ಸೇರುವ ಪ್ರಯತ್ನ ತೀವ್ರಗೊಳಿಸಿದ್ದು, ವರಿಷ್ಠರು ಒಪ್ಪಿಗೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Cabinet Reshuffle: ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

ಇನ್ನು ಹಳೆ ಮೈಸೂರು(Mysuru) ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಒಕ್ಕಲಿಗ ಸಮುದಾಯವನ್ನು ಸೆಳೆಯಬೇಕು ಮತ್ತು ಕಾಂಗ್ರೆಸ್‌-ಜೆಡಿಎಸ್‌ನ(Congress-JDS) ಒಕ್ಕಲಿಗ ನಾಯಕರಿಗೆ ಎದಿರೇಟು ನೀಡಬೇಕು ಎಂಬ ಉದ್ದೇಶದಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yediyurappa) ಪುತ್ರ ಬಿ.ವೈ.ವಿಜಯೇಂದ್ರ(BY Vijayendra) ಅವರಿಗೂ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಯಡಿಯೂರಪ್ಪ ಅಭಿಮಾನಿಗಳಿಂದ ಬಲವಾಗಿ ಕೇಳಿಬರುತ್ತಿದೆ. ಒಂದು ವೇಳೆ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಬಗ್ಗೆಯೂ ಸ್ಪಷ್ಟಚಿತ್ರಣ ಹೊರಬೀಳುವ ಸಂಭವವಿದೆ.

ಎಸ್‌ಸಿ,ಎಸ್‌ಟಿ ಪಂಚಮಸಾಲಿ ಮೀಸಲಾತಿಗೆ ಬದ್ಧ:

ಬೆಂಗಳೂರು: ಪರಿಶಿಷ್ಟ ಜಾತಿ(SC), ಪರಿಶಿಷ್ಟ ಪಂಗಡ(ST), ಪಂಚಮಸಾಲಿ(Panchamasali) ಹಾಗೂ ಹಿಂದುಳಿದ ವರ್ಗಗಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಅಗತ್ಯ ವರದಿ ಪಡೆದು ಸದ್ಯದಲ್ಲೇ ಸರ್ವಪಕ್ಷಗಳ ಸಭೆ ಕರೆದು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಬೆಂಗಳೂರಿನ ಹಲವೆಡೆ ಇಂದು ಪವರ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?