ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

Published : Nov 22, 2023, 03:00 AM IST
ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

ಸಾರಾಂಶ

ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ. ಅವರು ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಅವರನ್ನು ಸಿಎಂ ಆಗಿ ನೋಡಬೇಕೆಂದು ಜನರು ಬಯಸುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗಲಿದ್ದಾರೆ ಎಂದ ಕಾಂಗ್ರೆಸ್‌ ಶಾಸಕ ವಿಶ್ವಾಸ ವೈದ್ಯ 

ಬೆಳಗಾವಿ(ನ.22): ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿದರೂ ಅದನ್ನು ಗಮನಕ್ಕೆ ತೆಗೆದುಕೊಳ್ಳದೇ ಮತ್ತೆ ಸಿಎಂ ಆಗುವ ಹೇಳಿಕೆ ಮತ್ತೆ ಸಂಚಲನ ಮೂಡಿಸಿದೆ. ಸವದತ್ತಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿಶ್ವಾಸ ವೈದ್ಯ ಅವರು ಸೋಮವಾರ ಜಿಲ್ಲೆಯ ಯರಗಟ್ಟಿಯಲ್ಲಿ ಮಾತನಾಡಿ, ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿರುವುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಯರಗಟ್ಟಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ. ಅವರು ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಅವರನ್ನು ಸಿಎಂ ಆಗಿ ನೋಡಬೇಕೆಂದು ಜನರು ಬಯಸುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗಲಿದ್ದಾರೆ ಎಂದರು.

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಸತೀಶ ಜಾರಕಿಹೊಳಿ ಅವರ ಪರಮಾಪ್ತರಲ್ಲಿ ಶಾಸಕ ವಿಶ್ವಾಸ ವೈದ್ಯ ಕೂಡ ಒಬ್ಬರು. ಕಾಂಗ್ರೆಸ್‌ ನಾಯಕರೊಂದಿಗೆ ಮುನಿಸಿಕೊಂಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಪಕ್ಷದ ಹೈಕಮಾಂಡ್‌ ಸಮಾಧಾನಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ, ಬಹಿರಂಗವಾಗಿ ಪಕ್ಷದ ನಾಯಕರು ಯಾರೂ ಹೇಳಿಕೆ ನೀಡದಂತೆ ತಾಕೀತು ಕೂಡ ಮಾಡಿತ್ತು. ಈ ಎಲ್ಲ ಸೂಚನೆಗಳ ನಡುವೆಯೂ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅ‍ವರ ಈ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!