ವಿಧಾನ ಪರಿಷತ್‌ ಚುನಾವಣೆಗೆ 11 ಅಭ್ಯರ್ಥಿಗಳ ನಾಮಪತ್ರ

By Kannadaprabha News  |  First Published May 14, 2024, 10:22 AM IST

ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.


ಬೆಂಗಳೂರು(ಮೇ.14):  ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

Tap to resize

Latest Videos

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಮೂವರು ಶಿಕ್ಷಣ ಸಚಿವರಿಗೆ ಸೂಚನೆ

ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್‌ 2, ಜೆಡಿಎಸ್‌ 1, ಪಕ್ಷೇತರರ 5 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಇನ್ನು, ಈವರೆಗೆ ಸಲ್ಲಿಯಾದ 19 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್‌ 2, ಜೆಡಿಎಸ್‌ 1, ಪಕ್ಷೇತರರ 7 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

click me!