ಡಿ.ಕೆ.ಶಿವಕುಮಾರ್‌ ಸಿಎಂ ಪರವಾಗಿ 140 ಶಾಸಕರ ಬೆಂಬಲ: ಶಾಸಕ ಇಕ್ಬಾಲ್ ಹುಸೇನ್‌

Kannadaprabha News   | Kannada Prabha
Published : Jul 02, 2025, 06:24 AM IST
iqbal hussain

ಸಾರಾಂಶ

ಕಾಂಗ್ರೆಸ್ಸಿನ 140 ಶಾಸಕರ ಪೈಕಿ ಸಾಕಷ್ಟು ಶಾಸಕರ ಬೆಂಬಲ ಡಿ.ಕೆ.ಶಿವಕುಮಾರ್‌ ಅವರಿಗೆ ಇದೆ. ಹೀಗಾಗಿ ಅವರಿಗೆ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಬೆಂಗಳೂರು (ಜು.02): ಕಾಂಗ್ರೆಸ್ಸಿನ 140 ಶಾಸಕರ ಪೈಕಿ ಸಾಕಷ್ಟು ಶಾಸಕರ ಬೆಂಬಲ ಡಿ.ಕೆ.ಶಿವಕುಮಾರ್‌ ಅವರಿಗೆ ಇದೆ. ಹೀಗಾಗಿ ಅವರಿಗೆ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಕೆಪಿಸಿಸಿ ಬಹಿರಂಗ ಹೇಳಿಕೆ ನೀಡಬಾರದು ಎಂದು ಸತತ ಎಚ್ಚರಿಕೆ ನೀಡಿದ ನಂತರವೂ ಇಕ್ಬಾಲ್‌ ಹುಸೇನ್‌ ಮಂಗಳವಾರ ಮತ್ತೊಮ್ಮೆ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.

ಸಿದ್ದರಾಮಯ್ಯ ಅವರು ಈ ಹಿಂದೆ 5 ವರ್ಷ ಮುಖ್ಯಮಂತ್ರಿಗಳಾಗಿದ್ದರು. ಈಗ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ. ಶಿವಕುಮಾರ್‌ ಅವರಿಗೆ ಬಿಟ್ಟುಕೊಡಲಿ. ಡಿ.ಕೆ.ಶಿವಕುಮಾರ್‌ ಅವರಿಗೆ ಸಾಕಷ್ಟು ಶಾಸಕರು, ಹೈಕಮಾಂಡ್‌ ಬೆಂಬಲವಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧನಾಗಿದ್ದೇನೆ. ನಮಗೆಲ್ಲ ಬದಲಾವಣೆ ಬೇಕಿದೆ. 2028ರಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಸುಲಭವಾಗಿ ಅಧಿಕಾರಕ್ಕೆ ಬರಬೇಕಾದರೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು. ಪಕ್ಷ ಸಂಘಟನೆಯಲ್ಲಿ ಅವರ ಪಾತ್ರ ದೊಡ್ಡದಿದೆ. 140 ಶಾಸಕರು ಗೆಲ್ಲಲು ಅವರ ಶ್ರಮವಿದೆ ಎಂದರು.

ರಾಜ್ಯ ನಾಯಕತ್ವ ಮಾಧ್ಯಮಗಳ ಎದುರು ಮಾತನಾಡಬಾರದು ಎಂದು ಹೇಳಿದೆ. ಆದರೆ, ಡಿ.ಕೆ.ಶಿವಕುಮಾರ್‌ ಅವರು ನಮ್ಮ ಜಿಲ್ಲೆಯವರು. ಮೇಕೆದಾಟು ಪಾದಯಾತ್ರೆ, ಭಾರತ್‌ ಜೋಡೋ ಯಾತ್ರೆಯ ಮುಂಚೂಣಿಯಲ್ಲಿದ್ದರು. ಕೊರೋನಾ ಸಮಯದಲ್ಲಿ ಜನರನ್ನು ರಕ್ಷಿಸಲು ಸಾಕಷ್ಟು ಹೋರಾಟ ಮಾಡಿದರು. ಹೀಗಾಗಿ ಅವರು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ಅಲ್ಲದೆ, ಹೈಕಮಾಂಡ್‌ ನಾಯಕರು ಮಾತನಾಡುವುದನ್ನು ಗಮನಿಸಿದರೆ ಬದಲಾವಣೆ ಮಾಡಬಹುದು ಎಂದೂ ತಿಳಿಸಿದರು. ನಾನೂ ಕೂಡ ಸಿದ್ದರಾಮಯ್ಯ ಅವರ ಆತ್ಮೀಯ. ಆದರೆ, ನಮಗೆ ಬದಲಾವಣೆ ಬೇಕಿದೆ. ಸಿದ್ದರಾಮಯ್ಯ ಅವರು ಈಗಾಗಲೇ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದಾರೆ. ಈ ಅವಧಿಯ ಉಳಿದ ಎರಡೂವರೆ ವರ್ಷವನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟುಕೊಡಲಿ ಎಂದರು.

ಡಿಕೆಶಿಗೆ ಅವಕಾಶ ಸಿಗಲಿ ಎಂದಿದ್ದೇನೆ-ಬಾಲಕೃಷ್ಣ: ಸುರ್ಜೇವಾಲಾ ಸಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ, ಸಭೆಯಲ್ಲಿ ರಾಜಕೀಯ ಚರ್ಚೆಗಳಾಗಿಲ್ಲ. ಕ್ಷೇತ್ರ ಮತ್ತು ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ. ಬದಲಾವಣೆಗಳ ಕುರಿತು ಚರ್ಚೆ ನಡೆದಿಲ್ಲ. ಆದರೆ, ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್‌ ಕೊಡುಗೆಯಿದೆ. ಅವರಿಗೂ ಅವಕಾಶ ನೀಡಬೇಕು ಎಂದು ಹೇಳಿದ್ದೆ. ನಾಳೆಯೇ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿಲ್ಲ. ಅಲ್ಲದೆ, ನಾನು ಮುಖ್ಯಮಂತ್ರಿ ಮಾಡುವಷ್ಟು ದೊಡ್ಡವನಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ