ರಾಜಸ್ಥಾನ ಬಿಕ್ಕಟ್ಟಿನ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಐ.ಟಿ ಶಾಕ್‌!

Published : Jul 14, 2020, 04:39 PM ISTUpdated : Jul 14, 2020, 05:04 PM IST
ರಾಜಸ್ಥಾನ ಬಿಕ್ಕಟ್ಟಿನ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಐ.ಟಿ ಶಾಕ್‌!

ಸಾರಾಂಶ

ಬಿಕ್ಕಟ್ಟಿನ ಬೆನ್ನಲ್ಲೇ ಐ.ಟಿ ಶಾಕ್‌ ರಾಜಸ್ಥಾನ ಕಾಂಗ್ರೆಸ್‌ ಮುಖಂಡರ ಸಂಸ್ಥೆಗಳಿಗೂ ಬಿಸಿ| ಅಶೋಕ್‌ ಗೆಹ್ಲೋಟ್‌ ಹಾಗೂ ಡಿಸಿಎಂ ಸಚಿನ್‌ ಪೈಲಟ್‌ ಮಧ್ಯೆ ಉದ್ಭವಿಸಿದ ರಾಜಕೀಯ ಬಿಕ್ಕಟ್ಟು| ರಾಜಸ್ಥಾನ ಹಲವು ಕಾಂಗ್ರೆಸ್‌ ನಾಯಕರಿಗೆ ಸೇರಿದ ಕಚೇರಿ, ಉದ್ಯಮ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ರೇಡ್

ಜೈಪುರ(ಜು.14): ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹಾಗೂ ಡಿಸಿಎಂ ಸಚಿನ್‌ ಪೈಲಟ್‌ ಮಧ್ಯೆ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ನಡುವೆಯೇ, ರಾಜಸ್ಥಾನ ಹಲವು ಕಾಂಗ್ರೆಸ್‌ ನಾಯಕರಿಗೆ ಸೇರಿದ ಕಚೇರಿ, ಉದ್ಯಮ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

ಸತ್ಯಕ್ಕೆ ಎಂದೂ ಸೋಲಿಲ್ಲ: ಸಚಿನ್ ಪೈಲಟ್‌ ಟ್ವೀಟ್‌ ಮರ್ಮವೇನು?

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ 80ಕ್ಕೂ ಹೆಚ್ಚು ಅಧಿಕಾರಿಗಳು ದೆಹಲಿ, ಜೈಪುರ, ಕೋಟಾ ಹಾಗೂ ಮುಂಬೈನಲ್ಲಿರುವ ಈ ಕಂಪನಿಗಳ ಕಚೇರಿಗಳಿಗೆ ಲಗ್ಗೆ ಇಟ್ಟು ದಾಖಲೆಗಳನ್ನು ಕಲೆ ಹಾಕಿದ್ದಾರೆ. ರಾಜಸ್ಥಾನದ ಕಾಂಗ್ರೆಸ್‌ ಉಪಾಧ್ಯಕ್ಷ ರಾಜೀವ್‌ ಅರೋರಾ ಒಡೆತನದ ಆಮ್ರಪಾಲಿ ಜ್ಯುವೆಲರಿ ಮಳಿಗೆ ಹಾಗೂ ಧರ್ಮೇಂದ್ರ ರಾಥೋಡ್‌ಗೆ ಸೇರಿದ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜಸ್ಥಾನ ಕಾಂಗ್ರೆಸ್‌ ಮುಖಂಡರನ್ನು ಗುರಿಯಾಗಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಈ ಐ.ಟಿ ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ನಿಂದ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಿ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ
ವಿಧಾನಸಭೆ ಚುನಾವಣೆ ಸ್ಪರ್ಧೆಗೆ ಸಿದ್ಧವಾಗಿದ್ದ ನಟಿ ಲಕ್ಷ್ಮಿ ಪ್ರಿಯಾ; ಆದ್ರೆ ವೋಟರ್ ಲಿಸ್ಟ್‌ನಲ್ಲೇ ಹೆಸರಿಲ್ಲ!