ಬೆಳಗಾವಿ ಅಧಿವೇಶನ: ನಾಳೆಯಿಂದ 2 ದಿನ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆ

By Kannadaprabha News  |  First Published Dec 5, 2023, 7:17 AM IST

ಬೆಂಗಳೂರು(ಡಿ.05):  ಈ ಬಾರಿಯ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.


ಬೆಂಗಳೂರು(ಡಿ.05):  ಈ ಬಾರಿಯ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ಬೆಳಗಾವಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲವಾಗುತ್ತದೆ ಎಂಬ ಭಾವನೆಯಿದೆ. ಆದರೆ, ಸಾಕಷ್ಟು ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ನಡೆಯುವುದಿಲ್ಲ. ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗಾಗಿ ವಿಧಾನಪರಿಷತ್‌ನಲ್ಲಿ ಎರಡು ದಿನ ಮೀಸಲಿಡಲಾಗುವುದು ಎಂದರು.
ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿರುವ ಸಂಘಟನೆಗಳನ್ನು ಕರೆದು ಈಗಲೇ ಮಾತುಕತೆ ನಡೆಸುವಂತೆ ಕೃಷಿ, ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದರು.
ಅದರ ಜತೆಗೆ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಬೇಕಾಗುವ ವ್ಯವಸ್ಥೆ ಮಾಡಬೇಕೆಂದು ಕೋರಿದ್ದೇನೆ ಎಂದು ತಿಳಿಸಿದರು.

Tap to resize

Latest Videos

ಬೆಳಗಾವಿ ಅಧಿವೇಶನ 2023: ಮೊದಲ ದಿನವೇ ಸಚಿವರ ಗೈರಿಗೆ ಸಭಾಪತಿ ಹೊರಟ್ಟಿ ಗರಂ

ಕಳೆದ ವರ್ಷ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ 102ಕ್ಕೂ ಹೆಚ್ಚಿನ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದವು. ಅಲ್ಲದೆ, 64ಕ್ಕೂ ಹೆಚ್ಚಿನ ಸಂಘಟನೆಗಳು ಪ್ರತಿಭಟನೆ, ಸತ್ಯಾಗ್ರಹ, ಧರಣಿಯಂತಹ ಹೋರಾಟ ನಡೆಸಿದ್ದವು. ಈ ಎಲ್ಲ ಪ್ರತಿಭಟನೆಗಳಲ್ಲಿ 65ರಿಂದ 80 ಸಾವಿರ ಜನರು ಪಾಲ್ಗೊಂಡಿದ್ದರು. ಅವೆಲ್ಲಕ್ಕಿಂತ ವಿಶೇಷವಾಗಿ ಪಂಚಮಸಾಲಿ ಮೀಲಸಾತಿಗೆ ಒತ್ತಾಯಿಸಿ ನಡೆದ ಪಾದಯಾತ್ರೆ ಮತ್ತು ಪ್ರತಿಭಟನೆಯಲ್ಲಿ 1.50 ಲಕ್ಷಕ್ಕೂ ಹೆಚ್ಚಿನ ಜನ ಬೆಳಗಾವಿಗೆ ಆಗಮಿಸಿ ಪ್ರತಿಭಟಿಸಿದ್ದರು. ಈ ಎಲ್ಲ ಕಾರಣಗಳಿಂದಾಗಿ ಸಾಕಷ್ಟು ಅವ್ಯವಸ್ಥೆಯಾಗಿತ್ತು. ಈ ಬಾರಿ ಅದಕ್ಕೆ ಆಸ್ಪದ ಕೊಡದಂತೆ ಮಾಡಲು ಈಗಲೇ ಪರಿಹಾರ ಕಂಡುಕೊಳ್ಳುವಂತೆ ಸಚಿವರುಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ವಿಪಕ್ಷದ ಎಲ್ಲ ಪ್ರಶ್ನೆಗೆ ಕಾಂಗ್ರೆಸ್‌ ಸರ್ಕಾರ ಉತ್ತರಿಸಲಿದೆ: ಸಿಎಂ ಸಿದ್ದರಾಮಯ್ಯ

ಶಾಸಕರ ಭವನ ನಿರ್ಮಾಣಕ್ಕೆ ಸಲಹೆ

ಬೆಳಗಾವಿಯಲ್ಲಿ ನಡೆಯುವ ಪ್ರತಿ ಅಧಿವೇಶನದ ಸಂದರ್ಭದಲ್ಲೂ ವಸತಿಗಾಗಿ ಕೋಟ್ಯಾಂತರ ರು. ವ್ಯಯಿಸಲಾಗುತ್ತಿದೆ. ಅದರಿಂದ ಸರ್ಕಾರಕ್ಕೆ ನಷ್ಟವುಂಟಾಗುತ್ತಿದೆ. ಅದನ್ನು ತಪ್ಪಿಸುವ ಸಲುವಾಗಿ ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲಿ ಮೀಸಲಿರಿಸಲಾಗಿರುವ 20 ಎಕರೆ ಜಾಗದಲ್ಲಿ ಶಾಸಕರ ಭವನ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದೇನೆ. ಶಾಸಕರ ಭವನ ನಿರ್ಮಾಣದ ನಂತರ ಅದನ್ನು ಖಾಸಗಿಯವರ ನಿರ್ವಹಣೆಗೆ ನೀಡಿದರೆ, ಭವನ ಸುಸ್ಥಿತಿಯಲ್ಲಿರಲಿದೆ. ಅದರಿಂದ ಸರ್ಕಾರಕ್ಕೂ ಆದಾಯ ಬರಲಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ಸುವರ್ಣ ಸೌಧ ನಿರ್ಮಾಣದ ಉದ್ದೇಶ ಈಡೇರಿಲ್ಲ

ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣದ ಉದ್ದೇಶ ಈವರೆಗೆ ಈಡೇರಿಲ್ಲ. ಸರ್ಕಾರದ ಹಲವು ಕಚೇರಿಗಳಲ್ಲಿ ಬೆಳಗಾವಿಗೆ ಸ್ಥಳಾಂತರಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಈಡೇರಿವೆ. ಆದರೆ, ಯಾವ ಸರ್ಕಾರಗಳೂ ಅದರ ಬಗ್ಗೆ ಇಚ್ಛಾಶಕ್ತಿ ಹೊಂದಿಲ್ಲ. ಈಗಿನ ಸರ್ಕಾರವಾದರೂ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಸರ್ಕಾರಿ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಹೊರಟ್ಟಿ ಹೇಳಿದರು.

click me!