
ಕಾಗವಾಡ(ಸೆ.07): ‘ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಪಾರ್ಲಿಮೆಂಟ್ ಚುನಾವಣೆಗೆ ಹೋಗುತ್ತೇವೆ’ ಎಂದು ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಮ್ಮ ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ. 135 ಶಾಸಕರೂ ಒಟ್ಟಾಗಿದ್ದೇವೆ. ಆದರೆ, ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಅನೇಕರು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಲೋಕಸಭಾ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.
ನಡುಕ ಏನಿದ್ದರು ಡಿಕೆಶಿ ಮತ್ತವರ ಪಕ್ಷಕ್ಕೆ: ಅಶ್ವತ್ಥ ನಾರಾಯಣ
ಕಾಂಗ್ರೆಸ್‌ನಲ್ಲಿಯೇ ಅತೃಪ್ತ ಶಾಸಕರಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ರಮೇಶ ಜಾರಕಿಹೊಳಿಯವರಿಗೆ ಮಾಡುವುದಕ್ಕೆ ಯಾವುದೇ ಕೆಲಸವಿಲ್ಲ. ಅದಕ್ಕಾಗಿ ನಮ್ಮ ಪಕ್ಷದಲ್ಲಿ ಅತೃಪ್ತ ಶಾಸಕರಿದ್ದಾರೆ ಎನ್ನುತ್ತಿದ್ದಾರೆ ಎಂದು ಜಾರಕಿಹೊಳಿಗೆ ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.