ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ 20 ಸ್ಥಾನ: ಸಿಎಂ ಸಿದ್ದರಾಮಯ್ಯ

Published : Jun 11, 2023, 12:05 PM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ 20 ಸ್ಥಾನ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಗೆಲ್ಲಲಿದ್ದು, ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ನಂಜನಗೂಡು (ಜೂ.11): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಗೆಲ್ಲಲಿದ್ದು, ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣ ಕ್ಷೇತ್ರದ ಬಿಳಿಗೆರೆ ಬೋರೆಯಲ್ಲಿ ಶನಿವಾರ ನಡೆದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು. ನಮ್ಮ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಮೇಲೆ ಬಿಜೆಪಿ ನಾಯಕರಿಗೆ ಹೇಳಲು ಏನೂ ಇಲ್ಲದಾಗಿದೆ. ಆದ್ದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬುದು ಗೊತ್ತಾಗಿ ಅವರಿಗೆ ನಡುಕ ಶುರುವಾಗಿದೆ ಎಂದರು.

ಸಮಾರಂಭದಲ್ಲಿ ಗೊಬ್ಬರ ಬೆಲೆ ಕಡಿಮೆ ಮಾಡುವಂತೆ ರೈತರಿಂದ ಕೂಗು ಕೇಳಿ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಗೊಬ್ಬರ ಬೆಲೆ ಕಡಿಮೆ ಮಾಡುವುದು ಕೇಂದ್ರ ಸರ್ಕಾರ, ನಾನಲ್ಲ. ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದ್ದು, ಆಗ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ, ಗೊಬ್ಬರದ ಬೆಲೆಯೂ ಕಡಿಮೆಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್‌ ಗೆದ್ದಿದೆ. 8 ಜಿಲ್ಲೆಯಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆದ್ದಿಲ್ಲ. 

ನಮಗೇ ನೀರಿಲ್ಲ, ತಮಿಳ್ನಾಡಿಗೆ ಹೇಗೆ ಕೊಡುವುದು: ಸಿಎಂ ಸಿದ್ದರಾಮಯ್ಯ

ಆದ್ದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎಂದರು. ಪ್ರಧಾನಿ ಮೋದಿಯವರು ಕಾಂಗ್ರೆಸ್‌ನ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದರೆ ದೇಶ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಂದ ಈ ಹೇಳಿಕೆ ನಿರೀಕ್ಷಿರಲಿಲ್ಲ. ಅವರು ಜನರ ಪರವಾಗಿ ಗ್ಯಾರಂಟಿ ಅನುಷ್ಠಾನಗೊಳಿಸಲು ನೆರವಾಗಬೇಕಿತ್ತು. ಆದರೆ, ಟೀಕೆ ವ್ಯಕ್ತಪಡಿಸಿ ರಾಜಕೀಯ ಪ್ರಾರಂಭಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಕೊಟ್ಟ165 ಭರವಸೆಗಳಲ್ಲಿ 159 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇವು. 

ಈ ಬಾರಿಯೂ ಕೂಡ ಎಷ್ಟೇ ಹಣ ಖರ್ಚಾದರೂ ಸಹ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸುತ್ತೇವೆ. ಆದರೆ, ಬಿಜೆಪಿ ಕೊಟ್ಟಭರವಸೆ ಈಡೇರಿಸದೆ ವಚನಭ್ರಷ್ಟವಾಗಿದೆ ಎಂದರು. ಜಿಎಸ್‌ಟಿ ನ್ಯಾಯಯುತ ಪಾಲಿಗೆ ಒತ್ತಾಯ: ರಾಜ್ಯದ ಪಾಲಿನ ಜಿಎಸ್‌ಟಿ ಹಣಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಜಿಎಸ್‌ಟಿ ಸೇರಿದಂತೆ ರಾಜ್ಯದ ಪಾಲಿಗೆ ನ್ಯಾಯಯುತವಾಗಿ ಬರಬೇಕಿರುವ ಎಲ್ಲಾ ಅನುದಾನಗಳನ್ನು ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದು ಅವರು ಭರವಸೆ ನೀಡಿದರು.

48000 ಮತಗಳ ಅಂತರದಿಂದ ಗೆಲ್ಲಿಸಿದ್ದರಿಂದ ಮತ್ತೆ ಸಿಎಂ ಆದೆ: ‘ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿ 48 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ ಕಾರಣ ನಾನು ಮತ್ತೆ ಮುಖ್ಯಮಂತ್ರಿಯಾದೆ. ನನಗೆ ಶಕ್ತಿ ತುಂಬಿರುವ ಪಕ್ಷದ ಕಾರ್ಯಕರ್ತರು, ತಾಯಂದಿರು ಮತ್ತು ವರುಣ ಕ್ಷೇತ್ರದ ಜನತೆಗೆ ನಾನು ಚಿರಋುಣಿಯಾಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಬಿಳಿಗೆರೆ ಬೋರೆಯಲ್ಲಿ ಶನಿವಾರ ನಡೆದ ವರುಣ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ವಿದ್ಯುತ್‌ ಬಿಲ್‌ ಕಟ್ಟಬೇಡಿ, ಸಂಪರ್ಕ ಕಡಿತಗೊಳಿಸಿದ್ರೆ ನಾವಿದ್ದೇವೆ: ನಳಿನ್‌ ಕುಮಾರ್‌ ಕಟೀಲ್‌

‘ನಾನು ಮೊದಲನೆ ಬಾರಿ ನಿಂತಾಗ 28 ಸಾವಿರ ಅಂತರದಿಂದ ಗೆಲ್ಲಿಸಿದ ಕಾರಣ ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದೆ. 2ನೇ ಬಾರಿ 13 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಸಿಕ್ಕಿತು. ಮತ್ತೆ 3ನೇ ಬಾರಿ 48 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ ಕಾರಣ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ದೊರಕಿತು. ನೀವು ನನ್ನನ್ನು ಶಾಸಕನಾಗಿ ಆಯ್ಕೆ ಮಾಡದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ. ನನಗೆ ಇಂದು ಅಧಿಕಾರ ಸಿಕ್ಕಿದ್ದರೆ ನಿಮ್ಮ ಆಶೀರ್ವಾದವೇ ಕಾರಣ. ನನ್ನ ರಾಜಕೀಯ ಜೀವನದಲ್ಲೇ ಅತ್ಯಂತ ದೊಡ್ಡ ಅಂತರದ ಜಯ ಇದು. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ನನ್ನ ಉಸಿರು ಇರುವ ತನಕ ರಾಜ್ಯದ, ಕ್ಷೇತ್ರದ ಜನರ ಸೇವೆ ಮಾಡುತ್ತೇನೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ