
ವಿಧಾನ ಪರಿಷತ್ (ಜು.15): ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಯಾವಾಗಿನಿಂದ ಆರಂಭವಾಗಲಿದೆ ಎಂಬ ದಿನಾಂಕ ಪ್ರಕಟಿಸಲಾಗುವುದು. ನಂತರ ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆಗಸ್ಟ್ 16ರಂದು ನೇರ ನಗದು ವರ್ಗಾವಣೆ ಮೂಲಕ 2000 ರು. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ವಾರ ಪತ್ರಿಕಾಗೋಷ್ಠಿ ನಡೆಸಿ ಆ್ಯಪ್ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ ಪ್ರಕಟಿಸಲಾಗುವುದು.
ನಂತರ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ‘ಡಿಬಿಟಿ’ ಮೂಲಕ ಮುಖ್ಯಮಂತ್ರಿ ಅವರು ಆಗಸ್ಟ್ 16ರಂದು 2000 ರು. ಹಣ ಪಾವತಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಪ್ರತೀ ವರ್ಷ 30 ಸಾವಿರ ಕೋಟಿ ರು. ಬೇಕು. ಆದರೆ, ಈ ಸಾಲಿನಲ್ಲಿ 17,500 ಕೋಟಿ ರು. ಬೇಕಾಗಬಹುದೆಂದು ಅಂದಾಜಿಸಲಾಗಿದೆ. ಅಷ್ಟುಅನುದಾನವನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಒದಗಿಸಿದ್ದಾರೆ. ಯೋಜನೆ ಬಗ್ಗೆ ಮಾಹಿತಿ ನೀಡಲು ಆರಂಭಿಸಿರುವ ನಮ್ಮ 1902 ಸಹಾಯವಾಣಿಗೆ ಬರುತ್ತಿರುವ ಕರೆಗಳಲ್ಲಿ ಈ ಯೋಜನೆಯ ಬಗ್ಗೆ ಜನರಲ್ಲಿ ಹೆಚ್ಚು ಉತ್ಸಾಹ ಕಂಡುಬಂದಿದೆ ಎಂದು ತಿಳಿಸಿದರು.
ಕಾಂಗ್ರೆಸ್‌ನ ಕಣ, ಕಣದಲ್ಲೂ ಹಿಂದೂ ವಿರೋಧಿ ಗುಣವಿದೆ: ಮುತಾಲಿಕ್
ಅಂಗನವಾಡಿಗೆ ಕಳಪೆ ಆಹಾರ ಪೂರೈಕೆದಾರರ ವಿರುದ್ಧ ಕ್ರಮ: ಅಂಗನವಾಡಿಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಧಾನ್ಯಗಳು ಕೋಳಿ ಕೂಡ ತಿನ್ನದಷ್ಟುಕಳಪೆಯಾಗಿವೆ. ಇಂತಹ ಕಳಪೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುತ್ತಿರುವವರಿಗೆ ನೋಟಿಸ್ ನೀಡಲಾಗಿದ್ದು, ಬರುವ ಉತ್ತರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್ ಹೇಳಿದರು.
ಎಂ. ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಕಳಪೆ ಮಟ್ಟದ ಕಾಳು, ಮೊಟ್ಟೆಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳನ್ನು ಪೂರೈಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯಿಂದ ಸಮಗ್ರ ವರದಿ ಕೇಳಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ನಾನೇ ಕೆಲ ಕಡೆ ದಿಢೀರ್ ಭೇಟಿ ನೀಡಿದ್ದಾಗ ಕಳಪೆ ಆಹಾರವನ್ನು ಕಂಡು ಬೆಚ್ಚಿಬಿದ್ದಿದ್ದೇನೆ, ಆಹಾರ ಪೂರೈಕೆದಾರರು ಕಳಪೆ ಆಹಾರ ನೀಡುತ್ತಿರುವುದು ಖೇದಕರ ಎಂದು ಸಚಿವರು ಹೇಳಿದರು.
ನನಗೆ ಸಹಕರಿಸು ಎಂದು ಸ್ಟಾಪ್ ನರ್ಸ್ಗೆ ಕಿರುಕುಳ: ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಇಂತಹ ಲೋಪಗಳನ್ನು ತಪ್ಪಿಸಲು ಆಹಾರ ಪೂರೈಕೆ ವಿಕೇಂದ್ರಿಕರಣ ವ್ಯವಸ್ಥೆಯ ಬದಲು ಕೇಂದ್ರಿಕರಣ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದ್ದೇವೆ. ವಿವಿಧ ಜಿಲ್ಲೆಗಳಲ್ಲಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಈಗಾಗಲೇ ಸೂಚನೆ ನೀಡಿರುವುದಾಗಿ ಸಚಿವರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.