ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಅಡಿ ಮಾಸಿಕ ₹2000: ಸಚಿವ ಸಂಪುಟ ಒಪ್ಪಿಗೆ

By Kannadaprabha News  |  First Published Feb 16, 2024, 9:43 PM IST

ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲು ಗುರುವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 


ಬೆಂಗಳೂರು (ಫೆ.16): ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲು ಗುರುವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಈ ಯೋಜನೆಗೆ ಪರಿಗಣಿಸುವಾಗ ಜಿಲ್ಲಾಧಿಕಾರಿಗಳಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿಯನ್ನು ದಾಖಲೆಯಾಗಿ ಪರಿಗಣಿಸಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ರಾಜ್ಯದಲ್ಲಿರುವ ಸುಮಾರು 60 ಸಾವಿರ ಲಿಂಗತ್ವ ಅಲ್ಪಸಂಖ್ಯಾತರು ಕೂಡ ಗೃಹ ಲಕ್ಷ್ಮಿ ಯೋಜನೆಗೆ ಸರ್ಕಾರ ಅವಕಾಶ ನೀಡಿದಾಗ ಅರ್ಜಿ ಸಲ್ಲಿಸಿ ಯೋಜನೆಯ ಫಲಾನುಭವಿಗಳಾಗಬಹುದು. ಇದರಿಂದ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ಮಾಸಿಕ 2 ಸಾವಿರ ರು. ಅನುದಾನ ದೊರೆಯಲಿದೆ ಎಂದು ಸಚಿವರೊಬ್ಬರು ಮಾಹಿತಿ ನೀಡಿದರು.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಕೊಪ್ಪಳದ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರಗಳ ರಚನೆಗೆ ಸಂಬಂಧಿಸಿದ ಮೂರು ವಿಧೇಯಕಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024ಕ್ಕೆ ಒಪ್ಪಿಗೆ ನೀಡಿದ್ದು, ಈ ವಿಧೇಯಕಗಳನ್ನು ಹಾಲಿ ಬಜೆಟ್‌ ಅಧಿವೇಶನದಲ್ಲಿ ಮಂಡಿಸಿ ಸರ್ಕಾರ ಒಪ್ಪಿಗೆ ಪಡೆಯಲಿದೆ.

Tap to resize

Latest Videos

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಲೂಟಿ ಜಾತ್ರೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸಿ: ಸರ್ಕಾರ ಜಾರಿಗೊಳಿಸಿರುವ ವಿವಿಧ ಪಂಚಗ್ಯಾರಂಟಿ ಯೋಜನೆಗಳನ್ನು ಅರ್ಜಿ ಸಲ್ಲಿಸದೇ ಬಾಕಿಯಿರುವ ಹಾಗೂ ಅರ್ಜಿಸಲ್ಲಿಸಿ ಯೋಜನೆಯ ಸವಲತ್ತು ದೊರೆಯದ ಅರ್ಹ ಫಲಾನುಭವಿಗಳು ಕೂಡಲೆ ಹೆಸರು ನೋಂದಾಯಿಸಿಕೊಂಡು ಯೋಜನೆಗಳ ಸದುಪಯೋಗ ಪಡೆಯುವಂತೆ ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದನೆ ನೀಡಬೇಕು ಎಂದು ಸಿಡಿಪಿಒ ಅಂಬಿಕಾ ತಿಳಿಸಿದು.

ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಹೋಬಳಿ ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಪ್ರತಿ ಕುಟುಂಬಕ್ಕೆ ಆರ್ಥಿಕ ನೆರವು ದೊರೆಯುತ್ತಿದೆ, ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ 47,724 ಮಂದಿ ಅರ್ಜಿಸಲ್ಲಿಸಿದ್ದು, ಈಗಾಗಲೆ 39,453 ಮಂದಿ ಗೃಹಲಕ್ಷ್ಮೀ ಯೋಜನೆಯಲ್ಲಿ ಪ್ರತಿ ತಿಂಗಳು 2 ಸಾವಿರ ರು.ಗಳು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ, ಉಳಿದ 540 ಮಂದಿಯ ಬ್ಯಾಂಕ್ ಖಾತೆ ಸಮಸ್ಯೆಯಿಂದ ಹಣ ಜಮಾ ಆಗುತ್ತಿಲ್ಲ. ಹಣ ಜಮಾ ಆಗದ ಫಲಾನುಭವಿಗಳು ತಮ್ಮ ಕಚೇರಿಗೆ ಬಂದು ತಮ್ಮ ಅರ್ಜಿ ಪರಿಶೀಲಿಸಿ ತಮ್ಮ ಖಾತೆಯನ್ನು ಪರಿಶೀಲಿಸಿ ಸಮಸ್ಯೆ ಅರಿತು ಸರಿಪಡಿಸುವಂತೆ ತಿಳಿಸಿದರು.

ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ಅಂಚೆ ಕಚೇರಿಯಲ್ಲಿ ಆಧಾರ ಜೋಡಣೆಯೊಂದಿಗೆ ಖಾತೆ ತೆರದು ಅರ್ಜಿ ಸಲ್ಲಿಸಿದರೆ ಗೃಹಲಕ್ಷ್ಮಿ ಯೋಜನೆಯ ಸವಲತ್ತು ಪಡೆಯುವಂತೆ ತಿಳಿಸಿದ ಅವರು ಇದರೊಂದಿಗೆ 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲಮೋ ಪದವಿ ಪಡೆದ ನಿರುದ್ಯೋಗಿಗಳಿಗೆ 3000 ಸಾವಿರ ಹಾಗೂ 1500 ರು. ನಿರುದ್ಯೋಗಿ ಭತ್ಯ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆಯುವಂತೆ ಸೂಚಿಸಿದ ಅವರು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೌಕರ್ಯ ಸಿಗುತ್ತಿದೆ, ಶಕ್ತಿಯೋಜನೆ ಜಾರಿಯಾದಾಗಿನಿಂದ ಮಹಿಳೆಯಿಗೆ ಸದರಿ ಯೋಜನೆಯಿಂದಲೂ ಹಣ ಉಳಿತಾಯವಾಗುತ್ತಿದೆ ಎಂದು ತಿಳಿಸಿದರು.

click me!