
ಬೆಂಗಳೂರು (ಜು.27): ವಿಶ್ವವಿಖ್ಯಾತ ಕೃಷ್ಣರಾಜಸಾಗರ ಬಂದಾವನ (ಕೆಆರ್‌ಎಸ್) ಉದ್ಯಾನವನ್ನು ಪಿಪಿಪಿ ಮಾದರಿಯಲ್ಲಿ 2,663 ಕೋಟಿ ರು. ಅಂದಾಜು ವೆಚ್ಚದಲ್ಲಿ ಅಮೇರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಪ್ರಸ್ತಾವನೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀರಾವರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ತಾವನೆಯನ್ನು ಮಂಡಿಸಿದರು.
2018ರಲ್ಲೇ ರಾಜ್ಯ ಸರ್ಕಾರದಿಂದ 198 ಎಕರೆ ವಿಸ್ತೀರ್ಣದ ಕೆಆರ್‌ಎಸ್ ಬೃಂದಾವನವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಗೆ ನಿರ್ಧರಿಸಲಾಗಿತ್ತು. ವಿನ್ಯಾಸ ಮತ್ತಿತರ ವೆಚ್ಚಗಳಿಗೆ 5 ಕೋಟಿ ರು.ಗಳನ್ನು ಬಜೆಟ್‌ನಲ್ಲಿ ಒದಗಿಸಲಾಗಿತ್ತು. ಕೆಆರ್‌ಎಸ್ ಆಕರ್ಷಣೆ ಕಡಿಮೆಯಾಗುತ್ತಿರುವುದರಿಂದ ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲು ಸಮಗ್ರ ಅಭಿವೃದ್ಧಿ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 34.5 ವರ್ಷಗಳ ಗುತ್ತಿಗೆ ಅವಧಿಗೆ ಪಿಪಿಪಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ಬಳಿಕ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು ಎಂದು ತಿಳಿದುಬಂದಿದೆ.
ಹೊಟ್ಟೆಕಿಚ್ಚಿನಿಂದ ನನ್ಮೇಲೆ ವೈಯಕ್ತಿಕ ದಾಳಿ, 40 ವರ್ಷದ ನಿಷ್ಕಳಂಕ ಜೀವನಕ್ಕೆ ಮಸಿ ಹಚ್ಚಲೆತ್ನ: ಸಿದ್ದರಾಮಯ್ಯ
ಜಲಕ್ರೀಡೆ ಸೇರಿ ಹಲವು ಪ್ರಸ್ತಾಪ: ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಎಚ್.ಕೆ. ಪಾಟೀಲ್, ಜಲ ಸಂಪನ್ಮೂಲ ಇಲಾಖೆಯಿಂದ ಮಂಡ್ಯ ಜಿಲ್ಲೆ ಕೆಆರ್‌ಎಸ್ ಬೃಂದಾವನವನ್ನು ಪಿಪಿಪಿ ಮಾದರಿಯಲ್ಲಿ 2600 ಕೋಟಿ ರು. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದೆ. ಜಲಕ್ರೀಡೆ ಒಳಗೊಂಡಂತೆ ಡಿಸ್ನಿವರ್ಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಾಸ್ಟರ್ ಪ್ಲಾನ್‌ನಲ್ಲಿ ಹೆಲಿ ಪ್ಯಾಡ್, ಪಾರ್ಕಿಂಗ್, ಕ್ಯಾಸ್ಕೇಡ್, ಕೆ.ಆರ್. ವೃತ್ತ ಅಭಿವೃದ್ಧಿ, ಎಂಟ್ರಿ ಆರ್ಚ್, ಟಿಕೆಟ್ ಪ್ಲಾಜಾ ಸೇರಿದಂತೆ ಹಲವು ನಿರ್ಮಾಣಗಳನ್ನು ಒಳಗೊಂಡಿರಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.