Lok Sabha Election 2024: ಕಾಂಗ್ರೆಸ್‌ನ 17 ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ, ಡಿಕೆಶಿ

Published : Mar 21, 2024, 06:57 AM IST
Lok Sabha Election 2024: ಕಾಂಗ್ರೆಸ್‌ನ 17 ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ, ಡಿಕೆಶಿ

ಸಾರಾಂಶ

ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ಗುರುವಾರ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ಶುಕ್ರವಾರ ಝೂಮ್ ಮೀಟಿಂಗ್‌ ಮೂಲಕ ವರಿಷ್ಠರೊಂದಿಗೆ ಆ ಕುರಿತು ಚರ್ಚೆ ಮಾಡುತ್ತೇವೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

ನವದೆಹಲಿ(ಮಾ.21): ಲೋಕಸಭಾ ಚುನಾವಣೆಗೆ ರಾಜ್ಯದ 17 ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮವಾಗಿದ್ದು, ಗುರುವಾರ ಪ್ರಕಟವಾಗಲಿದೆ. ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ನವದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ಗುರುವಾರ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ಶುಕ್ರವಾರ ಝೂಮ್ ಮೀಟಿಂಗ್‌ ಮೂಲಕ ವರಿಷ್ಠರೊಂದಿಗೆ ಆ ಕುರಿತು ಚರ್ಚೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಕೋಲಾರ ನಾಯಕರ ಭೇಟಿ ಬಗ್ಗೆ ಕೇಳಿದಾಗ, ರಾಜಕೀಯವಾಗಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳುತ್ತಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ 2024: ಬಿಜೆಪಿ ಟಿಕೆಟ್‌ ನಾಳೆ ಪ್ರಕಟ, ಯಡಿಯೂರಪ್ಪ

ಬಾಗಲಕೋಟೆ ಟಿಕೆಟ್ ಸಿಗದ ಕಾರಣ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಕುರಿತ ಪ್ರಶ್ನೆಗೆ, ಉಸ್ತುವಾರಿ ಸಚಿವರು ಯಾರ ಹೆಸರನ್ನು ಸಲಹೆ ಮಾಡಿದ್ದಾರೋ ಅವರ ಎಲ್ಲಾ ಹೆಸರುಗಳು ಸಿಇಸಿ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಸ್ಪಷ್ಟನೆ ನೀಡಿದರು.

ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಪ್ರಶ್ನೆಗೆ, ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ, ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ. ಇಡೀ ದೇಶದಲ್ಲಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ಯುವಕರಿಗೆ ಅವಕಾಶ ನೀಡಿದ್ದೇವೆ. ಕರ್ನಾಟಕದ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ. ನಾವು ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಸಮರ್ಥರಿದ್ದು, ಎಲ್ಲರ ಮೇಲೂ ಹೊಣೆಗಾರಿಕೆ ಇದೆ ಎಂದರು.

ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರುವ ಬಗ್ಗೆ ಕೇಳಿದಾಗ, ಆ ವಿಚಾರವಾಗಿ ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ. ಬೇರೆ ಪಕ್ಷಗಳ ಬಗ್ಗೆ ಮಾತನಾಡಿಲ್ಲ. ಬಿಜೆಪಿಯಲ್ಲಿ ಅನೇಕರಿಗೆ ಅನ್ಯಾಯವಾಗಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಮುಂದೆ ಕಾಲ ಉತ್ತರಿಸುತ್ತದೆ ಎಂದು ಹೇಳಿದರು.

ಪ್ರಚಾರಕ್ಕಾಗಿ ಏನೇನೋ ಮಾತನಾಡ್ತಾರೆ, ಎಚ್‌ಡಿಕೆ ಮಾತಿಗೆ ನಾನು ಉತ್ತರ ನೀಡಲ್ಲ: ಡಿ.ಕೆ. ಸುರೇಶ್‌

ಹಳೇ ಫೋಟೋ ಇಟ್ಕೊಂಡು ಮಾತಾಡುತ್ತಿದ್ದಾರೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ ಹಂಚಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಾವು ಹಬ್ಬ ಹಾಗೂ ಇತರೆ ಕಾರ್ಯಕ್ರಮಗಳ ವೇಳೆ ಜನರಿಗೆ ಅನೇಕ ಬಾರಿ ಸಹಾಯ ಮಾಡಿದ್ದೇವೆ. ಹಳೆಯ ಫೋಟೋ ಇಟ್ಕೊಂಡು ಈಗ ನೀಡುತ್ತಿರಬಹುದು. ಅವರು ಬಹಳ ಪ್ರಾಮಾಣಿಕರು. ನಾನು ನನ್ನ ಮಗಳ ಮದುವೆ ಸಂದರ್ಭದಲ್ಲಿ ಎಲ್ಲರಿಗೂ ಸೀರೆ, ಬಟ್ಟೆ ಕೊಟ್ಟಿದ್ದೇನೆ. ಕನಕೋತ್ಸವ ಮಾಡಿದಾಗ ಸಿಹಿ ಹಂಚಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಉಡುಗೊರೆ ನೀಡಿದ್ದೇವೆ. ಕೋವಿಡ್ ಸಮಯದಲ್ಲಿ ಆಹಾರದ ಕಿಟ್ ನೀಡಿದ್ದೇವೆ. ಜನರಿಗೆ ನಾವು ಅನೇಕ ಬಾರಿ ಸಹಾಯ ಮಾಡಿದ್ದೇವೆ. ಚುನಾವಣಾ ನೀತಿ ಸಂಹಿತೆಗೂ ಮುನ್ನ ರಂಜಾನ್ ಹಬ್ಬದ ಸಂದರ್ಭದಲ್ಲಿ ನಾವು ಉಡುಗೊರೆ ನೀಡುತ್ತಾ ಬಂದಿದ್ದೇವೆ ಎಂದರು. 

ಬಿಜೆಪಿ ಮೆಚ್ಚಿಸಲು ಎಚ್ಡಿಕೆ ನನ್ನ ಬಗ್ಗೆ ಮಾತನಾಡ್ತಾರೆ

ಡಿ.ಕೆ.ಸಹೋದರರು ವಿಷ ಹಾಕಿದ್ದಾರೆ, ಸರ್ಕಾರ ಬೀಳುವುದಕ್ಕೆ ಅವರೇ ಕಾರಣ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ಸರ್ಕಾರ ಕೆಡವಿದರಲ್ಲಿ ನನ್ನ ಪಾತ್ರ ಏನಾದರೂ ಇದ್ದರೆ ಆ ದೇವರು, ಮಂಜುನಾಥ ನನಗೆ ಶಿಕ್ಷೆ ನೀಡಲಿದ್ದಾರೆ. ನನಗೂ ಅವರಿಗೂ ಅನೇಕ ಭಿನ್ನಾಭಿಪ್ರಾಯ ಇದ್ದರೂ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಸದನದಲ್ಲಿ ಅವರ ಬೆನ್ನಿಗೆ ನಿಂತಿದ್ದೆ. ಇದು ರಾಜ್ಯದ ಜನರಿಗೂ ಗೊತ್ತು. ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಮರುದಿನ ಬಿಜೆಪಿ ನಾಯಕರ ಜತೆ ಚರ್ಚೆ ಮಾಡಿದ್ದಾರೆ. ಈಗ ಏನಾದರೂ ಹೇಳಬೇಕಲ್ಲ ಅದಕ್ಕೆ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ನನ್ನ ಮೇಲೆ ಕೋಪ ತೋರಿಸಿ ಬಿಜೆಪಿ ಅವರಿಗೆ ಖುಷಿ ಪಡಿಸುವುದಾದರೆ ಮಾಡಲಿ. ನನ್ನ ಅಭ್ಯಂತರವಿಲ್ಲ. ಅವರಿಗೆ ಒಳ್ಳೆಯದಾಗಲಿ. ಅವರ ಆರೋಗ್ಯ ಚೇತರಿಸಿಕೊಳ್ಳಲಿ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ