622 ಕೋಟಿ ಆಸ್ತಿಯ ಒಡೆಯ ಮಂಡ್ಯ ಕೈ ಅಭ್ಯರ್ಥಿ ಕಣದಲ್ಲಿರುವ ಅತ್ಯಂತ ಶ್ರೀಮಂತ ಕುಳ, 2ನೇ ಸ್ಥಾನ ಯಾರಿಗೆ?

By Anusha Kb  |  First Published Apr 23, 2024, 1:13 PM IST

2ನೇ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ಒಟ್ಟು ದೇಶದ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಯಾರು ಎಂಬ ಡಿಟೇಲ್ ಇಲ್ಲಿದೆ. 


ಬೆಂಗಳೂರು: 2ನೇ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ಒಟ್ಟು ದೇಶದ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರ ಮನ ಸೆಳೆಯಲು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಈಗಾಗಲೇ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರದೊಂದಿಗೆ ಆಸ್ತಿ ಘೋಷಣೆಯನ್ನು ಮಾಡಿರುವುದರಿಂದ 2ನೇ ಹಂತದ ಚುನಾವಣೆಯಲ್ಲಿ ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಯಾರು ಎಂಬ ಡಿಟೇಲ್ ಇಲ್ಲಿದೆ. 

ಮಂಡ್ಯದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೆ ಗೌಡ ಅವರು ಶ್ರೀಮಂತಿಕೆಯಲ್ಲಿ ಮೊದಲನೇ ಸ್ಥಾನದಲ್ಲಿದ್ದು, 2ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್ ಇದ್ದಾರೆ. ಹಾಗೆಯೇ 3ನೇ ಸ್ಥಾನದಲ್ಲಿ ಉತ್ತರ ಪ್ರದೇಶದ ಮಥುರಾದಿಂದ ಕಣಕ್ಕಿಳಿದಿರುವ ನಟಿ ಹೇಮ ಮಾಲಿನಿ ಇದ್ದಾರೆ. ಹೀಗಾಗಿ ಶ್ರೀಮಂತಿಕೆಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ರಾಜ್ಯದ ಅಭ್ಯರ್ಥಿಗಳೇ ಅದರಲ್ಲೂ ಕಾಂಗ್ರೆಸ್ ನಾಯಕರೇ ಇದ್ದಾರೆ.

Tap to resize

Latest Videos

Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯಲ್ಲಿ ಈ ಮಾಹಿತಿ ಇದೆ. 2ನೇ ಹಂತದ ಲೋಕಸಭಾ ಚುನಾವಣೆ ಒಟ್ಟು 89 ಕ್ಷೇತ್ರಗಳಿಗೆ ನಡೆಯುತ್ತಿದ್ದು,1192 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಅಭ್ಯರ್ಥಿಗಳ ಪೈಕಿ ಒಟ್ಟು 390 ಜನ ಕೋಟ್ಯಾಧಿಪತಿಗಳಾಗಿದ್ದಾರೆ. ಅಂದರೆ ಅಭ್ಯರ್ಥಿಗಳ ಪೈಕಿ ಶೇಕಡಾ 33ರಷ್ಟು ಜನ ಕೋಟ್ಯಾಧಿಪತಿಗಳಾಗಿದ್ದಾರೆ.  ಅಂದಹಾಗೆ ಮೊದಲ ಸ್ಥಾನದಲ್ಲಿರು ಮಂಡ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಆಸ್ತಿ ಮೌಲ್ಯ 622 ಕೋಟಿ. ಹಾಗೆಯೇ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ, ಕಾಂಗ್ರೆಸ್ ಟ್ರಬಲ್ ಶೂಟರ್‌ ಡಿಕೆ ಶಿವಕುಮಾರ್ ಸೋದರ ಡಿಕೆ ಸುರೇಶ್‌ ಅವರ ಆಸ್ತಿ ಮೌಲ್ಯ 593 ಕೋಟಿ. ನಂತರದ ಸ್ಥಾನದಲ್ಲಿರುವುದು ಬಾಲಿವುಡ್ ನಟಿ ಹೇಮಾ ಮಾಲಿನಿ, ಉತ್ತರ ಪ್ರದೇಶದ ಮಥುರಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಹೇಮಾ ಮಾಲಿನಿ ಆಸ್ತಿ ಮೌಲ್ಯ 278 ಕೋಟಿ.

 2ನೇ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ರಾಜ್ಯದ ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು,ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಸೇರಿದಂತೆ ದೇಶದ 89 ಕ್ಷೇತ್ರಗಳಿಗೆ ಅಂದು ಚುನಾವಣೆ ನಡೆಯಲಿದೆ. 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

ಎದುರಾಳಿ ಯಾರೆಂಬುದು ಮುಖ್ಯವಲ್ಲ: ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಸಂದರ್ಶನ!

12 ರಾಜ್ಯಗಳ ಒಟ್ಟು 89 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. 

click me!