3 ಡಿಸಿಎಂ ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುವೆ: ಸಿದ್ದು ಸ್ಪಷ್ಟನೆ

Published : Sep 18, 2023, 04:00 AM IST
3 ಡಿಸಿಎಂ ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುವೆ: ಸಿದ್ದು ಸ್ಪಷ್ಟನೆ

ಸಾರಾಂಶ

ರಾಜ್ಯದಲ್ಲಿ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಬೇಕಲ್ವೇ? ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ (ಸೆ.18): ರಾಜ್ಯದಲ್ಲಿ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಬೇಕಲ್ವೇ? ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. 

ರಾಜ್ಯದಲ್ಲಿ ಮೂರು ಡಿಸಿಎಂಗಳು ಬೇಕೆಂದು ಸಹಕಾರ ಸಚಿವ ರಾಜಣ್ಣ ಅವರು ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ಹೇಳಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟದಲ್ಲಿ ಈಗಾಗಲೇ ಒಬ್ಬರು ಡಿಸಿಎಂ ಇದ್ದಾರೆ. ಆದರೆ, ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್‌ ಜೊತೆ ಮಾತನಾಡುತ್ತೀನಿ ಅಂತಲೂ ಹೇಳಿದ್ದಾರೆ. ಅವರು ಮಾತನಾಡಲಿ. ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡಬೇಕಲ್ವೆ? ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುತ್ತೇನೆ ಎಂದರು.

ದೇಶದಲ್ಲಿ ಸಂವಿಧಾನಕ್ಕಿಂತ ಬೇರೆ ಯಾವ ಧರ್ಮವು ದೊಡ್ಡದಲ್ಲ: ಸಚಿವ ಮಹದೇವಪ್ಪ

ರಾಜ್ಯದ ಮೊದಲ ಹೆಲ್ತ್ ಎಟಿಎಂ ಶುರು: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಿಂದ ಕಲಬುರಗಿಯಲ್ಲಿ ‘ಆರೋಗ್ಯ ಮಿತ್ರ’ ಹೆಲ್ತ್‌ ಎಟಿಎಂ ಯೋಜನೆ ಜಾರಿ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದರು.

ಎಚ್.ಪಿ.ಎಂಟರ್‌ಪ್ರೈಸಸ್ ವತಿಯಿಂದ 25 ಹೆಲ್ತ್ ಎಟಿಎಂ ಘಟಕಗಳನ್ನು ಸಿಎಸ್‌ಆರ್‌ ಅನುದಾನದಡಿ ಪಡೆದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸುಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಆರೋಗ್ಯ ಕೇಂದ್ರಗಳಾದ ವೆಲ್‌ನೆಸ್ ಸೆಂಟರ್‌ ಸೇರಿ 25 ಆಯ್ದ ಸ್ಥಳಗಳಲ್ಲಿ ಸದ್ಯಕ್ಕೆ ಈ ಎಟಿಎಂ ಕಾರ್ಯಾಚರಿಸಲಿದೆ. ಈ ಎಟಿಎಂ ಮೂಲಕ ಸುಲಭ ಮತ್ತು ತ್ವರಿತವಾಗಿ ಆರೋಗ್ಯ ತಪಾಸಣೆ ಮಾಡಲು ಸಾಧ್ಯವಿದೆ. ರೋಗಿಗಳ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಎಲ್ಲೂ ಸೋರಿಕೆಯಾಗದಂತೆ ಎಟಿಎಂ ನಿರ್ವಹಿಸಲಾಗುತ್ತದೆ.

ರಾಜ್ಯದಲ್ಲಿ ಬರಗಾಲ ಕಾಡಲು ಸಿದ್ದರಾಮಯ್ಯ ಕಾಲ್ಗುಣ ಕಾರಣ: ಸಿ.ಟಿ.ರವಿ

ಜನಸ್ನೇಹಿ ಎಟಿಎಂ: ಆರೋಗ್ಯ ಎಟಿಎಂ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವಾಗಿದ್ದು ಪ್ರಾಥಮಿಕ ಮತ್ತು ತಡೆಗಟ್ಟಬಹುದಾದ ಆರೋಗ್ಯ ಸೇವೆಗಳನ್ನು ಸುಲಭವಾಗಿ ಹಾಗೂ ಕೈಗಟುಕುವ ದರದಲ್ಲಿ ಒದಗಿಸುತ್ತದೆ. ಇದರಿಂದ ನಗರ ಪ್ರದೇಶಗಳಲ್ಲಿ ಜನರ ಜೀವನ ಶೈಲಿಗೆ ಅನುಗುಣವಾಗಿ, ಕಡಿಮೆ ಸಮಯದಲ್ಲಿ ಪರೀಕ್ಷೆಗಳನ್ನು ಮಾಡುವ ಮೂಲಕ ಸಮಯ ಮತ್ತು ಹಣ ಉಳಿಸಬಹುದು. ಆರೋಗ್ಯ ಸಿಬ್ಬಂದಿ ಕೊರತೆಯ ಸಮಸ್ಯೆಯ ನಡುವೆಯೂ ದುರ್ಗಮ ಪ್ರದೇಶಗಳಿಗೂ ಆರೋಗ್ಯ ಸೇವೆಗಳನ್ನು ತಲುಪಿಸಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ