3 ಡಿಸಿಎಂಗಳನ್ನ ಕೈಬಿಡುವುದು ಒಳ್ಳೆಯದು ಎಂದು ಸಲಹೆ ಕೊಟ್ಟ ಬಿಜೆಪಿ ನಾಯಕ

By Suvarna News  |  First Published Dec 12, 2019, 3:13 PM IST

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದರು. ಇದೀಗ ಮತ್ತೊಂದು ಹೇಳಿಕೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 


ವಿಜಯಪುರ, (ಡಿ.12): ಸ್ವಪಕ್ಷದ ನಾಯಕರನ್ನು ಟೀಕಿಸಿ ಪಕ್ಷದ ಕೆಂಗಣ್ಣಿಗೆ ಗುರಿಯಾಗುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷಕ್ಕೆ ಸಲಹೆಯೊಂದನ್ನು ನೀಡಿ ಕೆಲವ ಕಣ್ಣುಕೆಂಪಾಗುವಂತೆ ಮಾಡಿದ್ದಾರೆ.

ಇಂದು (ಗುರುವರ) ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್,  ರಾಜ್ಯ ಸರ್ಕಾರದಲ್ಲಿ ಇರುವ ಮೂರು ಡಿಸಿಎಂ ಸ್ಥಾನಗಳನ್ನು ಕೈಬಿಡುವುದು ಒಳ್ಳೆಯದು ಎಂದು ಪರೋಕ್ಷವಾಗಿ ರಾಜ್ಯ ನಾಯಕರಿಗೆ ಹಾಗೂ ಹೈಕಮಾಂಡ್‌ಗೆ ಸಲಹೆ ನೀಡಿದರು.

Latest Videos

ಸಂತ್ರಸ್ತರು ಭಿಕ್ಷುಕರಲ್ಲ: ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಿದ ಯತ್ನಾಳ್

ಉಪ ಮುಖ್ಯಮಂತ್ರಿ ಸಂವಿಧಾನತ್ಮಕವಾದ ಹುದ್ದೆ ಅಲ್ಲ. ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಸಾಕು. ಉಪ ಮುಖ್ಯಮಂತ್ರಿ ಹುದ್ದೆಗಳ ಅವಶ್ಯಕತೆ ಇಲ್ಲ. ಹೀಗಾಗಿ ಉಳಿದವರು ಮಂತ್ರಿಗಳಾಗಿರಲಿ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಮಂತ್ರಿ ಸ್ಥಾನ ಕಲ್ಪಿಸಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಕೊಟ್ಟರೆ ನೋಡೋಣ. ಗೂಟದ ಕಾರು ಹಾಗೂ ಅಂಗರಕ್ಷಕರಿಗಾಗಿ ಮಂತ್ರಿ ಪದವಿ ಬೇಡ. ಅಭಿವೃದ್ಧಿಗಾಗಿ ಕೊಡಲಿ ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದು ತೇಲಿಬಿಟ್ಟರು.

ಬಿಜೆಪಿ ರಾಷ್ಟ್ರೀಯ ನಾಯಕರು ಜಾರ್ಖಂಡ್ ಚುನಾವಣೆಯಲ್ಲಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆಗೆ ಎರಡು ವಾರ ಕಾಯೋಣ ಎಂದರು. 

ಇತ್ತೀಚೆಗಷ್ಟೇ ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ನೆರೆ ಪರಿಹಾರ ವಿಚಾರಕ್ಕೆ ರಾಜ್ಯ ಬಿಜೆಪಿ ಸಂಸದರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದರು. ಬಳಿಕ ಅವರಿಗೆ ಪಕ್ಷದಿಂದ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. 

ಡಿಸೆಂಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!