ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಭಿನ್ನರಿಂದ 3 ಲಿಂಗಾಯತ ನಾಯಕರ ಹೆಸರು

Published : Feb 11, 2025, 10:44 AM IST
ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಭಿನ್ನರಿಂದ 3 ಲಿಂಗಾಯತ ನಾಯಕರ ಹೆಸರು

ಸಾರಾಂಶ

ಪಕ್ಷದಲ್ಲಿನ ಭಿನ್ನಮತೀಯರ ಬೇಡಿಕೆ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ಬದಲಿಸುವುದೇ ಆದಲ್ಲಿ ಆಗ ಹಿರಿಯರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಮಾತ್ರ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗಲು ಸಾಧ್ಯ. ಇಲ್ಲದಿದ್ದರೆ ಮತ್ತೆ ಭಿನ್ನಮತೀಯ ಚಟುವಟಿಕೆ ಮುಂದುವರೆಯುವ ಅಪಾಯ ವಿದೆ ಎಂಬ ಬಗ್ಗೆ ಚರ್ಚೆ ನಡೆದಿದೆ.

ಬೆಂಗಳೂರು(ಫೆ.11):  ಒಂದು ವೇಳೆ ಬಿಜೆಪಿ ಹೈಕಮಾಂಡ್ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಿಸುವ ನಿರ್ಣಯ ಕೈಗೊಂಡಲ್ಲಿ ಲಿಂಗಾಯತ ಸಮುದಾಯದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ಪರಿಶೀಲಿ ಸಬೇಕು ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ನಡೆಸಿದ ಚರ್ಚೆಯಲ್ಲಿ ಲಿಂಗಾಯತ ಸಮುದಾಯದವರನ್ನೇ ಪರಿಗಣಿಸಬೇಕು ಎಂದಾದಲ್ಲಿ ಈ ಮೂರು ಹೆಸರುಗಳ ಪೈಕಿ ಒಬ್ಬರನ್ನು ನೇಮಕ ಮಾಡಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ದಿಲ್ಲಿಯಲ್ಲಿ ಬಿಜೆಪಿ ಲಿಂಗಾಯತ ನಾಯಕರ ಪ್ರತ್ಯೇಕ ಸಭೆ: ಕುತೂಹಲಕ್ಕೆ ಕಾರಣವಾದ ಮೀಟಿಂಗ್‌!

ಪಕ್ಷದಲ್ಲಿನ ಭಿನ್ನಮತೀಯರ ಬೇಡಿಕೆ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ಬದಲಿಸುವುದೇ ಆದಲ್ಲಿ ಆಗ ಹಿರಿಯರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಮಾತ್ರ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗಲು ಸಾಧ್ಯ. ಇಲ್ಲದಿದ್ದರೆ ಮತ್ತೆ ಭಿನ್ನಮತೀಯ ಚಟುವಟಿಕೆ ಮುಂದುವರೆಯುವ ಅಪಾಯ ವಿದೆ ಎಂಬ ಬಗ್ಗೆ ಚರ್ಚೆ ನಡೆದಿದೆ.

ಕೇಂದ್ರ ಸಚಿವ ಸೋಮಣ್ಣ ಅವರ ನಿವಾಸದಲ್ಲಿ ನಡೆದ ಸಭೆಯಲ್ಲೂ ಈ ಬಗ್ಗೆ ಸಮಾ ಲೋಚನೆ ನಡೆದಿದೆ. ಆದರೆ, ಇದುವರೆಗೆ ಬೊಮ್ಮಾಯಿ ಅವರಾಗಲಿ, ಸೋಮಣ್ಣ ಅವರಾಗಲಿ ಅಥವಾ ನಿರಾಣಿ ಅವರಾಗಲಿ ಯಾವುದೇ ಸ್ಪಷ್ಟ ಅಭಿಪ್ರಾಯ ಹೊರಹಾಕಿಲ್ಲ ಎನ್ನಲಾಗಿದೆ.

ಸಿದ್ದರಾಮಯ್ಯ 660 ಕೆವಿ ಕರೆಂಟ್, ಅವರನ್ನು ಮುಟ್ಟೋದು ಅಷ್ಟು ಸುಲಭವಲ್ಲ: ಬಿಜೆಪಿ ಶಾಸಕ

ಸೋಮಣ್ಣ ಅವರು ಪ್ರಧಾನಿ ಮೋದಿ ಅವರ ಸಂಪುಟ ದಲ್ಲಿ ಅವಕಾಶ ಪಡೆದಿರುವುದರಿಂದ ಅದನ್ನು ಬಿಟ್ಟು ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಲು ಒಪ್ಪಿಕೊಳ್ಳುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೊಮ್ಮಾಯಿ ಅವರು ಸಂಸದರಾಗಿರುವುದರಿಂದ ರಾಜ್ಯಾಧ್ಯಕ್ಷ ಸ್ಥಾನದ ಜವಾ ಬ್ದಾರಿ ಒಪ್ಪಿಕೊಳ್ಳುವ ಸಾಧ್ಯತೆಯನ್ನೂ ಅಲ್ಲಗಳೆಯು ವಂತಿಲ್ಲ. ಮುರುಗೇಶ್ ನಿರಾಣಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಸದ್ಯ ಪಕ್ಷದ ರಾಜ್ಯ ಉಪಾಧ್ಯ ಕ್ಷರಾಗಿ ಕಾರ್ಯ ನಿರ್ವಹಿಸುತ್ತಿ ದ್ದಾರೆ. ಅವರೂ ರಾಜ್ಯಾಧ್ಯಕ್ಷ ಸ್ಥಾನ ನಿರಾಕರಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಾದೇಶಿಕ ಅಸಮಾನತೆ ಹೇಗೆ?:

ಸದ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ದಕ್ಷಿಣ ಕರ್ನಾಟಕಕ್ಕೆ ಸೇರಿದವರು. ಹೀಗಾಗಿ, ಇದೇ ಭಾಗದವರ ಬದಲು ಬೇರೊಂದು ಭಾಗ ದವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಅಭಿಪ್ರಾಯವೂ ಪಕ್ಷದಲ್ಲಿ ಬಲವಾಗಿ ಕೇಳಿಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!