ಮುಂದಿನ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ಆರಗ ಜ್ಞಾನೇಂದ್ರ

Published : Mar 07, 2024, 03:37 PM IST
ಮುಂದಿನ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ಆರಗ ಜ್ಞಾನೇಂದ್ರ

ಸಾರಾಂಶ

ಶೇ.33ರಷ್ಟು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯು ಮುಂದಿನ ಚುನಾವಣೆಯಲ್ಲಿ ಜಾರಿಗೆ ಬರಲಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.   

ಹೊಸನಗರ (ಮಾ.07): ಶೇ.33ರಷ್ಟು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯು ಮುಂದಿನ ಚುನಾವಣೆಯಲ್ಲಿ ಜಾರಿಗೆ ಬರಲಿದೆ ಎಂದು ಶಾಸಕ ಅರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ‘ನಾರಿ ಶಕ್ತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾರಿ ಬರದ ಮಹಿಳಾ ಮೀಸಲಾತಿಯು, ಬಿಜೆಪಿಯಿಂದ ಜಾರಿಗೊಳ್ಳುವ ಮೂಲಕ ಮಹಿಳೆಯರ ಬಹುದಿನಗಳ ಕನಸು ನನಸಾಗಿದೆ ಎಂದರು. ಕೇವಲ ಮನೆ, ಕೃಷಿ ಕೆಲಸಕ್ಕೆ ಮೀಸಲಾಗಿದ್ದ ಮಹಿಳೆಯರು, ಈಗ ಗಗನಯಾನ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಸಕ್ರಿಯರಾಗಿದ್ದಾರೆ ಎಂದರು.

ಮೋದಿ ಸರ್ಕಾರವು ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದೆ. ಸುಕನ್ಯ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆಯಲ್ಲಿ ಶೇ. 50ರವರೆಗೂ ಸಹಾಯಧನ ನೀಡಲಾಗುತ್ತದೆ ಎಂದರು. ಸಂಜೀವಿನಿ ಒಕ್ಕೂಟ ಯೋಜನೆಯು ಕೇಂದ್ರ ಸರ್ಕಾರದ ದೂರಗಾಮಿ ಯೋಜನೆ. ಪ್ರತಿ ಒಕ್ಕೂಟಕ್ಕೆ 8.50 ಕೋಟಿ ರು. ವಿತರಿಸಿದೆ. ತಾಲೂಕು ಮಟ್ಟದಲ್ಲಿ ಮುಂದಿನ ದಿನಗಳಲ್ಲಿ ಈ ಒಕ್ಕೂಟ ಕಾರ್ಯನಿರ್ವಹಿಸಲಿದೆ ಎಂದು ನುಡಿದರು. ವೇದಿಕೆಯಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ, ಉಪಾಧ್ಯಕ್ಷೆ ಪದ್ಮಾ ಸುರೇಶ. ಪಟ್ಟಣ ಪಂಚಾಯಿತಿ ಸದಸ್ಯೆ ಕೃಷ್ಣವೇಣಿ, ಪದಾಧಿಕಾರಿಗಳಾದ ಸುಮಾ ಸುರೇಶ್, ಲಕ್ಷ್ಮೀ ಶ್ರೀನಿವಾಸ್ ಮತ್ತಿತರರು ಇದ್ದರು.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ: ಸಂಸದ ರಾಘವೇಂದ್ರ ಭವಿಷ್ಯ

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಮಂಡಗದ್ದೆಯಲ್ಲಿ ನಿರ್ಮಾಣಗೊಳ್ಳಲಿರುವ ₹9 ಕೋಟಿ ಅನುದಾನದ 110/10 ಕೆವಿ ವಿದ್ಯುತ್ ಪವರ್ ಸ್ಟೇಷನ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಮುಕ್ಕಾಲು ಶತಮಾನ ಸಂದಿದ್ದರೂ ವಿದ್ಯುತ್ ಸೇರಿದಂತೆ ಜನರ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಕೊರತೆಯನ್ನು ನೀಗಿಸುವಲ್ಲಿ ಕೇಂದ್ರ ಸರ್ಕಾರ ಬದ್ಧತೆಯನ್ನು ಹೊಂದಿದೆ ಎಂದರು.

ಆರಂಭದಲ್ಲಿ ತಾಲೂಕಿನಲ್ಲಿ ಕೇವಲ ಒಂದೇ ಪವರ್ ಸ್ಟೇಷನ್ ಇದ್ದು, ಅದರಿಂದ ಇಡೀ ತಾಲೂಕಿಗೆ ವಿದ್ಯುತ್ ಒದಗಿಸುವ ಅನಿವಾರ್ಯತೆ ಇತ್ತು. ಪರಿಣಾಮ ಗ್ರಾಮೀಣ ಭಾಗದಲ್ಲಿ ಕೃಷಿ ಪಂಪ್‌ಸೆಟ್ ಮಾತ್ರವಲ್ಲದೇ, ಮನೆ ಉಪಯೋಗದ ಮಿಕ್ಸಿ ಮುಂತಾದ ಎಲೆಕ್ಟ್ರಿಕ್ ಉಪಕರಣಗಳಿಗೂ ವಿದ್ಯುತ್ ಕೊರತೆ ಇತ್ತು. ಅನಂತರದಲ್ಲಿ ನನ್ನ ಅವಧಿಯಲ್ಲಿ ಕಮ್ಮರಡಿ ಮತ್ತು ಕೋಣಂದೂರಿನಲ್ಲಿ ಎರಡು ಸ್ಟೇಷನ್‌ಗಳ ಮಂಜೂರು ಮಾಡಿಸಿದ್ದು, ಈ ಎರಡೂ ಸ್ಟೇಷನ್ ಆರಂಭವಾದ ನಂತರದಲ್ಲಿ ಒಂದಿಷ್ಟು ಈ ಸಮಸ್ಯೆ ಬಗೆಹರಿದಿತ್ತು ಎಂದು ತಿಳಿಸಿದರು.

Loksabha Elections 2024: ಈ ಬಾರಿಯು ನನ್ನ ಗೆಲುವಿಗೆ ಸಹಕಾರ ನೀಡಿ: ಸಂಸದ ಪ್ರತಾಪ್ ಸಿಂಹ

ಮಂಡಗದ್ದೆ ಹೋಬಳಿಯ ಸಮಸ್ಯೆಯನ್ನು ಗಮನಿಸಿ, ಈಚೆಗೆ ಬೆಜ್ಜವಳ್ಳಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ವಿದ್ಯುತ್ ವಿತರಣಾ ಸ್ಟೇಷನ್ ಮಂಜೂರು ಮಾಡಿಸಿದ್ದು ಕಾರ್ಯರಂಭಗೊಂಡಿದೆ. ಆದರೆ, ಈ ಹೋಬಳಿಯಲ್ಲಿ ಶಿವಮೊಗ್ಗ ತಾಲೂಕಿನ ಗಡಿಭಾಗದವರೆಗೂ ಕೊರತೆ ಇದೆ. ಇದನ್ನು ಸರಿದೂಗಿಸುವ ಸಲುವಾಗಿ ₹9 ಕೋಟಿ ವೆಚ್ಚದಲ್ಲಿ ತಾಲೂಕಿನ ನಾಲ್ಕನೇ ಪವರ್ ಸ್ಟೇಷನ್ ಮಂಜೂರು ಮಾಡಿಸಿದ್ದೇನೆ ಎಂದೂ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ