ಬಿಜೆಪಿ ಮುಖಂಡರಲ್ಲಿ ಹೆಚ್ಚಿದ ಭಯ, ನಾಲ್ವರು ನಾಯಕರು ರಾಜೀನಾಮೆ

Published : Aug 09, 2020, 08:28 PM ISTUpdated : Aug 09, 2020, 08:57 PM IST
ಬಿಜೆಪಿ ಮುಖಂಡರಲ್ಲಿ ಹೆಚ್ಚಿದ ಭಯ, ನಾಲ್ವರು ನಾಯಕರು ರಾಜೀನಾಮೆ

ಸಾರಾಂಶ

ಬಿಜೆಪಿ ಮುಖಂಡನೋರ್ವನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ, ಬಿಜೆಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಶ್ರೀನಗರ, (ಆ.09): ಬಿಜೆಪಿ ಕಾರ್ಯಕರ್ತನನ್ನು ಉಗ್ರರು ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಬುಡ್​ಗಾಮ್ ಮೋಹಿಂದ್ ಪುರ ಗ್ರಾಮದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಅಬ್ದುಲ್ ಹಮೀದ್ ನಜರ್ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೆ ಯತ್ನಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ನಜರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮ್ಮು ಕಾಶ್ಮೀರ BJP ಮುಖಂಡರ ಕೊಲೆ ಪ್ರೀ ಪ್ಲಾನ್..? 10 ಜನ ಪೊಲೀಸರ ಬಂಧನ

ಕಾರ್ಯಕರ್ತನ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಬುಡ್​ಗಾಮ್ ಜಿಲ್ಲೆಯ ನಾಲ್ವರು ಬಿಜೆಪಿ ಮುಖಂಡರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರಲ್ಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇರಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಈಗಾಗಲೇ ಇಬ್ಬರು ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲಾಗಿದೆ. ಅಲ್ಲದೇ ಒಬ್ಬನನ್ನು ಕಿಡ್ನಾಪ್ ಮಾಡಿದ್ದು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಇವೆಲ್ಲ ಬೆಳವಣಿಗೆಗಳ ಬಳಿಕ ಈಗ ನಾಲ್ಕು ಮುಖಂಡರು ರಾಜೀನಾಮೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ