4 MLC ಅವಧಿ ಜೂ. 30ಕ್ಕೆ ಅಂತ್ಯ: ರಾಜ್ಯ ಚುನಾವಣಾಧಿಕಾರಿ ದಿಢೀರ್ ಸುದ್ದಿಗೋಷ್ಠಿ

Published : Jan 21, 2020, 07:08 PM IST
4 MLC ಅವಧಿ ಜೂ. 30ಕ್ಕೆ ಅಂತ್ಯ: ರಾಜ್ಯ ಚುನಾವಣಾಧಿಕಾರಿ ದಿಢೀರ್ ಸುದ್ದಿಗೋಷ್ಠಿ

ಸಾರಾಂಶ

ರಾಜ್ಯದ ನಾಲ್ಕು ವಿಧಾನಪರಿಷತ್ ಸ್ಥಾನಗಳ ಅವಧಿ ಇದೇ ಜೂನ್ 30ಕ್ಕೆ ಮುಗಿಯಲಿದೆ . ಈ ಬಗ್ಗೆ ಇಂದು (ಮಂಗಳವಾರ)  ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದಾಎ. ಹಾಗಾದ್ರೆ ಅವರು ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಜ.21): ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳು ಸೇರಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಅವಧಿ ಇದೇ ಜೂನ್ 30ಕ್ಕೆ ಮುಗಿಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ್ ಕುಮಾರ್ ಅವರು, ಅವಧಿ ಮುಕ್ತಾಯಗೊಳ್ಳುವ ಈ 4 ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು. 

ಸವದಿ, ಶಂಕರ್‌ಗೆ ಎಂಎಲ್‌ಸಿ ಆತಂಕ! ಒಂದೇ ಸ್ಥಾನಕ್ಕೆ ಇಬ್ಬರ ಕಣ್ಣು

ಮತದಾರರ ನೋಂದಣಿಗೆ ಇನ್ನೂ ಸಾಕಷ್ಟು ಕಾಲಾವಕಾಶ ಇದ್ದು, ಮತದಾರರಾಗದವರು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಸದ್ಯ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಒಟ್ಟು 68,049 ಮತದಾರರಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 10,2287 ಮತದಾರರು ನೋಂದಣಿ‌ ಮಾಡಿಕೊಂಡಿದ್ದಾರೆ.  ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 24,941 ಮತದಾರರು ನೋಂದಣಿಯಾಗಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 17,610 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!