ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ: ಸಚಿವ ಎಚ್‌.ಕೆ.ಪಾಟೀಲ್‌

Published : May 10, 2025, 07:20 AM IST
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ: ಸಚಿವ ಎಚ್‌.ಕೆ.ಪಾಟೀಲ್‌

ಸಾರಾಂಶ

ಸರ್ಕಾರಿ ನೌಕರಿಯಲ್ಲಿರುವ ಅಂಗವಿಕಲ ಅಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.  

ಬೆಂಗಳೂರು (ಮೇ.10): ಸರ್ಕಾರಿ ನೌಕರಿಯಲ್ಲಿರುವ ಅಂಗವಿಕಲ ಅಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, ಗ್ರೂಪ್‌-ಬಿ ಮತ್ತು ಗ್ರೂಪ್‌-ಎನಲ್ಲಿ ಕಿರಿಯ ಶ್ರೇಣಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗವಿಕಲ ಅಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಲಾಗುವುದು. ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ 2016ರ ಅನ್ವಯ ಸುಪ್ರೀಂಕೋರ್ಟ್‌ ಆದೇಶದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಇನ್ನು ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ಯೋಜನೆ (ವೈದ್ಯಕೀಯ) ಸೇವೆಗಳ ನಿಯಮದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಿದ್ದರೆ ಅದರಲ್ಲಿ ಸಣ್ಣಪುಟ್ಟ ವಿಚಾರಗಳನ್ನು ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ಅದನ್ನು ಇಲಾಖಾ ಹಂತದಲ್ಲಿಯೇ ಅಂತಿಮಗೊಳಿಸಲು ಅವಕಾಶ ನೀಡಲಾಗಿದೆ. ನಿಯಮಗಳಿಗೆ ಯಾವುದೇ ಆಕ್ಷೇಪಣೆ/ಸಲಹೆಗಳು ಪ್ರಮುಖವಾಗಿದ್ದರೆ ಮಾತ್ರ ಸಚಿವ ಸಂಪುಟ ಸಭೆಯಲ್ಲಿ ತರಬಹುದು. 17 ವರ್ಷಗಳಾಗಿದ್ದರೂ ಇಎಸ್‌ಐಎಸ್‌ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಂಪೂರ್ಣವಾಗಿ ಮರುಪರಿಶೀಲನೆ ನಡೆಸಿಲ್ಲ. ಹೀಗಾಗಿ ಈ ಬಗ್ಗೆ ಗಮನಹರಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ

ವಿಶೇಷ ಕಾನೂನು ಅಗತ್ಯ: ಸಮಾಜದ ದೊಡ್ಡ ದೊಡ್ಡ ವ್ಯಕ್ತಿಗಳ ಅಕ್ರಮ, ಅನಾಚಾರಕ್ಕೆ ಕಠಿಣ ಶಿಕ್ಷೆ ಕೊಡಿಸಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು. ಭಾರತೀಯ ವಿದ್ಯಾ ಭವನದಲ್ಲಿ ಆಯೋಜಿಸಿದ್ದ ಡಾ। ಶಿವಕುಮಾರ ಸ್ವಾಮೀಜಿಗಳ 118ನೇ ಜಯಂತ್ಯೋತ್ಸವ ಹಾಗೂ ನ್ಯಾ.ಶಿವರಾಜ ಪಾಟೀಲರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪಿಕ್‌ ಪಾಕೆಟ್‌ ಮಾಡುವವರು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾವು ಆರೋಪಿಸುತ್ತೇವೆ. 

ಯುದ್ಧಕಾಲದಲ್ಲಿ ನಿರಂತರ ಸೇವೆ: ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಆದರೆ ಪರಮೋಚ್ಛ ಶಿಷ್ಟಾಚಾರ ಅನುಭವಿಸುವವರೇ ತಪ್ಪು ಮಾಡುತ್ತಿದ್ದಾರೆ. ಇಂತಹವರಿಗೆ ಕಠಿಣ ಶಿಕ್ಷೆ ವಿಧಿಸಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ. ಇಲ್ಲದಿದ್ದರೆ ದೊಡ್ಡವರು ಮಾಡುವ ತಪ್ಪುಗಳನ್ನು ಸಣ್ಣವರೂ ಮಾಡಿದರೆ ಸಮಾಜ ಎಲ್ಲಿಗೆ ತಲುಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶೇಷ ಕಾನೂನು ರೂಪಿಸಲು ನ್ಯಾಯಾಂಗ ಕ್ಷೇತ್ರದ ಗಣ್ಯರು ಸೂಕ್ತ ಮಾರ್ಗದರ್ಶನ ನೀಡಬೇಕು. ನ್ಯಾಯಮೂರ್ತಿ ಶಿವರಾಜ್‌ ಪಾಟೀಲರಿಂದಾಗಿಯೇ ರಾಜ್ಯದಲ್ಲಿ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ನ್ಯಾ.ಪಾಟೀಲರು ಸಕಾರಾತ್ಮಕ ಚಿಂತನೆ ಉಳ್ಳವರಾಗಿದ್ದಾರೆ. ಸರ್ಕಾರ ಮತ್ತು ಸಮಾಜಕ್ಕೆ ಬಹು ದೊಡ್ಡ ಆಸ್ತಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌