40 ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ : ಸತೀಶ ಜಾರಕಿಹೊಳಿ ಹೊಸ ಬಾಂಬ್‌

By Kannadaprabha News  |  First Published Oct 4, 2021, 9:36 AM IST
  • 40 ಜನ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರ್ತಾರೆ ಎನ್ನುವ ನಿಟ್ಟಿನಲ್ಲಿ ವರಿಷ್ಠರ ಮಟ್ಟದಲ್ಲಿ ಚರ್ಚೆ
  • ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೊಸ ಬಾಂಬ್‌

ಸಂಕೇಶ್ವರ (ಅ.04) : 40 ಜನ ಬಿಜೆಪಿ (BJP) ಶಾಸಕರು ಕಾಂಗ್ರೆಸ್‌ (Congress) ಪಕ್ಷಕ್ಕೆ ಬರ್ತಾರೆ ಎನ್ನುವ ನಿಟ್ಟಿನಲ್ಲಿ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ(KPCC) ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ (Satish jarkiholi) ಹೊಸ ಬಾಂಬ್‌ ಸಿಡಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅವರ ಪುತ್ರ ರಾಹುಲ್‌ ಜಾರಕಿಹೊಳಿ (Rahul jarkiholi) ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು(Bengaluru) ವರಿಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ. ಯಾರು ಎಷ್ಟು ಜನ ಬರ್ತಾರೆ ಅಂತ ನನಗೆ ಮಾಹಿತಿ ಇಲ್ಲ. ಆದರೆ ಶಾಸಕರು ಕಾಂಗ್ರೆಸ್‌ಗೆ ಬರುವ ಬಗ್ಗೆ ಚರ್ಚೆ ಆಗಿದ್ದು ನಿಜ ಎಂದು ಹೇಳಿದರು.

Latest Videos

undefined

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌(Lakshmi Hebbalkar) ವಿರುದ್ದ ಮಾಜಿ ಶಾಸಕ ಸಂಜಯ್‌ ಪಾಟೀಲ್‌ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸತೀಶ, ಸಂಜಯ್‌ ಪಾಟೀಲ್‌ ಅವರ ಇಂತಹ ಹೇಳಿಕೆಗಳು ಹೊಸದೇನಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎಂದರು. ಇನ್ನೂ ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಂತಿಮವಾಗಿ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

'ಬಿಜೆಪಿಯ ಈ ನಿಯಮ ಕಾಂಗ್ರೆಸ್‌ಗೂ ಬಂದ್ರೆ ಭಾರೀ ಒಳ್ಳೆದು'

ಬಿಜೆಪಿಯಲ್ಲಿ 75 ವರ್ಷಕ್ಕೆ ರಾಜಕೀಯ ನಿವೃತ್ತಿ ನಿಯಮ ಇರುವಂತೆ ಕಾಂಗ್ರೆಸ್‌ ಪಕ್ಷದಲ್ಲಿ ಆ ರೀತಿಯ ನಿಯಮ ಮಾಡಿದ್ರೆ ಒಳ್ಳೆದು. ಇನ್ನೂ ಎಂಎಲ್‌ಸಿ (MlC) ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿಬೆಳೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರಿದ್ದಾರೆ. ಗೆಲ್ಲುವಂತ ಅಭ್ಯರ್ಥಿಗೆ ಟಿಕೆಟ್‌ ನೀಡುತ್ತೇವೆ. ಅಂತಿಮವಾಗಿ ರಾಜ್ಯದ ನಾಯಕರು ಟಿಕೆಟ್‌ ಬಗ್ಗೆ ನಿರ್ಧಾರ ಮಾಡುತ್ತಾರೆ. ಲಖನ್‌ ಜಾರಕಿಹೊಳಿ ಎಂ ಎಲ್‌ಸಿ ಗೆ ಸ್ಪರ್ಧೆ ಮಾಡುತ್ತಿರುವುದು ಅವರ ಪಕ್ಷ ಅವರಿಗೆ ನಮ್ಮ ಪಕ್ಷ ನಮಗೆ ಎಂದ ಸತೀಶ ಜಾರಕಿಹೊಳಿ ಹೇಳಿದರು.

ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡುವುದು ನಿಶ್ಚಿತ. ಈಗಿನಿಂದಲೇ ನನ್ನ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರನ್ನು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ತೀರ್ಮಾನ ಮಾಡಬೇಕಿದೆ.

-ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ

click me!