ಚುನಾವಣೆ : 4 ಸೀಟಿಗೆ 40 ಜನ ಕಣದಲ್ಲಿ

By Kannadaprabha NewsFirst Published Oct 13, 2020, 7:45 AM IST
Highlights

4  ಸಿಟಿಗೆ 40 ಜನಕ್ಕೂ ಹೆಚ್ಚು ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.  ಕರ್ನಾಟಕದಲ್ಲಿ ಚುನಾವಣಾ ಕಣ ರಂಗೇರಿದೆ. 

ಬೆಂಗಳೂರು (ಅ.13):  ರಾಜ್ಯ ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಾಮಪತ್ರಗಳ ಹಿಂಪಡೆಯುವ ಕೊನೆಯ ದಿನ ಮುಕ್ತಾಯಗೊಂಡಿದ್ದು, ಅಂತಿಮವಾಗಿ ಚುನಾವಣಾ ಕಣದಲ್ಲಿ 40 ಅಭ್ಯರ್ಥಿಗಳು ಉಳಿದಿದ್ದಾರೆ.

ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಐವರು ನಾಮಪತ್ರವನ್ನು ವಾಪಸ್‌ ಪಡೆದುಕೊಂಡಿದ್ದಾರೆ. ಅಗ್ನೇಯ ಪದವೀಧರ ಕ್ಷೇತ್ರದಲ್ಲಿ ಮೂವರು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಇಬ್ಬರು ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮೂರು ಸಚಿವರ ಖಾತೆ ಬದಲು: ಶ್ರೀರಾಮುಲುಗೆ ಶಾಕ್, ಡಿಸಿಎಂ ಸಿಗಲಿಲ್ಲ, ಆರೋಗ್ಯ ಖಾತೆಯೂ ಇಲ್ಲ! ...

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 18 ನಾಮಪತ್ರಗಳು ಊರ್ಜಿತಗೊಂಡಿದ್ದು, ಮೂವರು ಹಿಂಪಡೆದುಕೊಂಡಿದ್ದಾರೆ. ಹೀಗಾಗಿ 11 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಅಂತೆಯೇ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಮಾನ್ಯವಾಗಿದ್ದು, ಇಬ್ಬರು ನಾಮಪತ್ರಗಳನ್ನು ವಾಪಸ್‌ ಪಡೆದುಕೊಂಡಿದ್ದಾರೆ. ಹೀಗಾಗಿ 9 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ. ಅ.28ರಂದು ಬೆಳಗ್ಗೆ 8ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನ.2ರಂದು ಮತ ಎಣಿಕೆ ನಡೆಯಲಿದೆ. ನ.5ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

click me!