ಕಾಂಗ್ರೆಸ್‌ ಸರ್ಕಾರದಲ್ಲೂ 40% ಕಮಿಷನ್: ಕೆಂಪಣ್ಣ ಗಂಭೀರ ಆರೋಪ

By Kannadaprabha NewsFirst Published Feb 9, 2024, 10:30 AM IST
Highlights

ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಭಾರೀ ಸಂಚಲನ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ, ಕೆಂಪಣ್ಣ ಇದೀಗ ಕಾಂಗ್ರೆಸ್‌ ಸರ್ಕಾರದ ವಿರುದ್ಧವೂ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.09): ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಭಾರೀ ಸಂಚಲನ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ, ಕೆಂಪಣ್ಣ ಇದೀಗ ಕಾಂಗ್ರೆಸ್‌ ಸರ್ಕಾರದ ವಿರುದ್ಧವೂ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗಿಂತ ಅಧಿಕಾರಿಗಳೇ ಪರ್ಸೆಂಟೇಜ್ ಕೇಳುತ್ತಿದ್ದಾರೆ ಎಂದು ಗಂಭೀರ ಆರೋಪ ಹೊರಿಸಿದ್ದಾರೆ. 

ಚಾಮರಾಜಪೇಟೆಯ ಸಂಘದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ, ಹಿಂದಿನ ಸರ್ಕಾರಗಳಲ್ಲಿ ಶಾಸಕರು, ಸಚಿವರು ನೇರವಾಗಿ ಕಮಿಷನ್ ಕೇಳುತ್ತಿದ್ದರು. ಆದರೆ ಈಗ ಇಲಾಖಾವಾರು ಅಧಿಕಾರಿಗಳು ಕಮಿಷನ್ ಕೇಳಲು ಆರಂಭಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಜನಪ್ರತಿನಿಧಿಗಳತ್ತ ಬೆರಳು ತೋರಿಸುತ್ತಾ ಬೇರೆಯವರಿಗೆ ನಾವು 'ಫೀಡ್' ಮಾಡಬೇಕು ಎಂಬ ಉತ್ತರ ನೀಡುತ್ತಿದ್ದಾರೆ. ಹಿಂದಿನ ಸರ್ಕಾರದಂತೆ ಈ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ ಮುಂದುವರಿದಿದೆ. ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳಲು ಆರಂಭಿಸಿದ್ದಾರೆ ಎಂದರು. 

Latest Videos

ಬಿಬಿಎಂಪಿ, ಪೊಲೀಸ್‌ ವಸತಿ ಗೃಹ ಅಭಿವೃದ್ಧಿ ನಿಗಮ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಟೆಂಡರ್‌ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ನನ್ನ ಬಳಿ ಎಲ್ಲ ದಾಖಲೆಗಳು ಇವೆ. ಅಲ್ಲದೆ, ಮತ್ತಷ್ಟು ದಾಖಲೆಗಳನ್ನು ಸಂಗ್ರಹಿಸುತ್ತಿದ್ದು, ಸೂಕ್ತ ಸಮಯದಲ್ಲಿ ಅದರ ಬಗ್ಗೆ ಮಾತನಾಡುತ್ತೇನೆ. ಈ ವ್ಯವಸ್ಥೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರಿಗೆ ಮನವಿ ಮಾಡಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗುತ್ತಿಗೆದಾರರ ನೆರವಿಗೆ ಬರುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಭೇಟಿಯಾಗಿ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಹೈಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಹಾಕಿಸಲು ಮಾಲೀಕರ ನಿರಾಸಕ್ತಿ: ಕಾರಣವೇನು?

ಪ್ಯಾಕೇಜ್ ಟೆಂಡರ್ ಇಂದಾಗಿ ಭ್ರಷ್ಟಾಚಾರ: ಕಮಿಷನ್ ಹಾಗೂ ಭ್ರಷ್ಟಾಚಾರಕ್ಕಾಗಿ ವಿವಿಧ ಇಲಾಖೆಗಳಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನಾವಶ್ಯಕವಾಗಿ ಪ್ಯಾಕೇಜ್‌ ಟೆಂಡರ್‌ ಕರೆಯಲಾಗುತ್ತಿದೆ. ಇದನ್ನು ಕೂಡಲೇ ರದ್ದು ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡು ತ್ತೇವೆ. ಪ್ಯಾಕೇಜ್ ಟೆಂಡರ್ ಕರೆಯದಂತೆ ಸಿಎಂಗೂ ಮನವಿ ಮಾಡಿದ್ದೇವೆ. ಆದರೂ, ಎಲ್ಲ ಇಲಾಖೆಗ ಳಲ್ಲೂ ಪ್ಯಾಕೇಜ್ ಟೆಂಡರ್ ಕರೆಯಲಾಗುತ್ತಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸ್ಥಳೀಯ ಗುತ್ತಿಗೆದಾರರನ್ನು ದೂರವಿಟ್ಟು ರಾಜ್ಯ, ರಾಷ್ಟ್ರ ಮಟ್ಟದ ಗುತ್ತಿಗೆದಾರರಿಗೆ ಟೆಂಡರ್ ನೀಡುವುದು ಇದರ ಉದ್ದೇಶ ಎಂದು ಕೆಂಪಣ್ಣ ದೂರಿದರು.

click me!