
ದೇವನಹಳ್ಳಿ(ಮೇ 02) ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಆಗಿದೆ. ಬಿಜೆಪಿ ಏನನ್ನು ಕಳೆದುಕೊಂಡಿಲ್ಲ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯ ಗಳಲ್ಲಿ ಬಿಜೆಪಿ ಇರಲಿಲ್ಲ. ಈಗ ಪುದುಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.
ಈ ಕ್ರೇಡಿಟ್ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾಗೆ ಸಲ್ಲಬೇಕು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತಗಳಿಕೆ ಹೆಚ್ಚಿಸಿಕೊಂಡಿದೆ. ಕಳೆದ ಬಾರಿ 4 ಸ್ಥಾನ ದಿಂದ ಈಗ 100 ರ ಸಮೀಪ ಹೋಗಿದ್ದೇವೆ. ಕೊನೆ ಘಳಿಗೆಯಲ್ಲಿ ಕಾಂಗ್ರೆಸ್, ಸಿಪಿಐಎಂ, ತೃಣಮೂಲ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ. ಹೀಗಾಗಿ ಮತಗಳು ಡಿವೈಡ್ ಆಗಲಿಲ್ಲ ಎಂದು ವಿಶ್ಲೇಷಣೆ ಮಾಡಿದರು.
'ಬದಲಾವಣೆ ಬಯಸಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶಗಳೆ ಸಾಕ್ಷಿ'
ಪಂಚರಾಜ್ಯ ಚುನಾವಣಾ ಫಲಿತಾಂಶ ಕೊರೋನಾ ಎರಡನೇ ಅಲೆ ನಡುವೆ ಹೊರಗೆ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಅಧಿಕಾರ ಹಿಡಿದುಕೊಂಡಿದ್ದಾರೆ. ಕೇರಳದಲ್ಲಿ ಪಿಣರಾಯಿ ವಿಜಯನ್ ಮತ್ತೆ ಅಧಿಕಾರ ಹಿಡಿದಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಬಸವಕಲ್ಯಾಣದಲ್ಲಿ ಬಿಜೆಪಿ ಗೆದ್ದರೆ ಮಸ್ಕಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ದೇಶದ ಲೆಕ್ಕದಲ್ಲಿ ಹೇಳುವುದಾದರೆ ಕಾಂಗ್ರೆಸ್ ಗೆ ಶೂನ್ಯ ಸಂಪಾದನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.